ನಿಟ್ಟೆ ಎನ್ ಎಸ್ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ
(Nitte) ನಿಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ನಿಟ್ಟೆ ಎನ್ ಎಸ್ ಎ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.
ಕಾಪು ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಶಂಕರ್ ಕುಂದರ್ ಸೂಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕೆ ರಾಮರಾಯ ಪಾಟ್ಕರ್ ರವರು ಮಕ್ಕಳಿಗೆ ಮಾಹಿತಿ ಮಾರ್ಗದರ್ಶನ ನೀಡಿ, ಪ್ರತಿಜ್ಞಾ ವಿಧಿ ಬೋಧಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಯೋಜನೆಯಿಂದ ಸಿಗುವ ಸುಜ್ಞಾನ ನಿಧಿಯ ಬಗ್ಗೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಉಷಾ, ಶಾಲೆಯ ನಾಯಕಿ ಕುಮಾರಿ ಯಶಸ್ವಿನಿ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕಾರದ ಸುಬ್ರಮಣ್ಯ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಖ್ಯಾತಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಶ್ವೇತಾ ಶೆಟ್ಟಿ ವಂದಿಸಿದರು.

