ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.
ಮಣಿಪಾಲ,ಜು.18; ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ. ಮೃತರನ್ನು ಪೆರ್ಡೂರು ಗೋಪಾಲ ನಾಯಕ್ (83ವ) ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತರು ದಶರಥ ನಗರದ ನರಸಿಂಗೆ ದೇವಸ್ಥಾನದ ಬಳಿ ಒಬ್ಬಂಟಿಯಾಗಿ ವಾಸವಾಗಿದ್ದರು. ಮಣಿಪಾಲ ಪೋಲಿಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು.
ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.