ಕಾಪು: ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯ ಮಾತನ್ನು ಈಡೇರಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಅಭಿನಂದನೆಗಳು ಎಂದು ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ತಿಳಿಸಿದ್ದಾರೆ.
ಗ್ಯಾರಂಟಿ ಜಾರಿಗಳನ್ನು ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಲ್ಲದೇ ಸಾಮಾನ್ಯ ಜನರಿಗೆ ಆಸರೆಯನ್ನು ನೀಡಿದೆ.
ಜನ ಸಾಮಾನ್ಯರು ಬೆಲೆ ಏರಿಕೆ ಹಾಗು ಯುವ ಜನತೆ ನಿರುದ್ಯೋಗದ ಸಮಸ್ಯೆಯಿಂದ ತತ್ತರಿಸಿರುವ ಈ ಸಂದರ್ಭದಲ್ಲಿ ಜನರ ಬದುಕಿಗೆ ಆಸರೆ ನೀಡಿದ ಕಾಂಗ್ರೆಸ್ ಸರಕಾರದ ಈ ಸಾಧನೆ ನಿಜವಾಗಿಯು ಶಾಘ್ಲನೀಯ.
ಜನರ ಕಷ್ಟಕ್ಕೆ ಸ್ಪಂದಿಸುವ ಸರಕಾರ ಎಂಬುದನ್ನು ಕಾಂಗ್ರೆಸ್ ಪಕ್ಷದ ಸರಕಾರ ಸಾಬೀತು ಪಡಿಸಿದೆ ಎಂದು ರಮೀಜ್ ವ್ಯಕ್ತಪಡಿಸಿದ್ದಾರೆ.

