ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕಾಪು ಮಂಡಲ ಘಟನಾಯಕರ ಸಭೆ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
(Kaup) ಕಾಪು: ಜೂನ್ 03 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬಂಧ ದಿನಾಂಕ ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರವರು ಕಾಪು ಮಂಡಲ ಬಿಜೆಪಿ ಕಚೇರಿ ಭೇಟಿ ನೀಡಿ ಘಟನಾಯಕರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವು ಶ್ರಮಿಸಬೇಕು ಎಂದರು.
ಈ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಗೀತಾಂಜಲಿ ಸುವರ್ಣ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

