# Tags
#ಸಂಘ, ಸಂಸ್ಥೆಗಳು

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (‘Gadige’ Coastal Marathi Coverence 2024 at Alvas College on Nov 9-10)

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024

(Mangaluru) ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಠಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಠಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಠಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್. ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು, ನಮ್ಮ ಈ ಸಮಾವೇಶವು ಮುಖ್ಯವಾಗಿ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧ್ಯೇಯಘೋಷವನ್ನು ಹೊಂದಿದೆ.

 ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಈ ಸಮುದಾಯದ ಸುಮಾರು ಶೇಕಾಡ 80ರಷ್ಟು ಜನ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು, ಇವರು ಅನೇಕ ಸಮಸ್ಯೆಗಳನ್ನು ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ, ಹಾಗೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನಾವರಣ ಮಾಡುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸುಮಾರು 15 ರಿಂದ 20 ಸಾವಿರ ಜನ ಭಾಗವಹಿಸುವವರಿದ್ದಾರೆ.

ಈ ಸಮಾವೇಶದಲ್ಲಿ ಮರಾಠಿಗರ ವಿವಿಧ ಆಚಾರ-ವಿಚಾರ ಸಂಸ್ಕಾರಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ, ಮೂರು ಗೋಷ್ಠಿಗಳು, ಉಪನ್ಯಾಸ ಹಾಗೂ ಸನ್ಮಾನ ಮತ್ತು ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮಗಳು ನಡೆಯಲಿವೆ.

 ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ನಮ್ಮ ಬಹು ನಿರೀಕ್ಷೆಯ “ಗದ್ದಿಗೆ” ಸ್ಮರಣ ಸಂಚಿಕೆಯನ್ನು ಡಾ. ಎಂ. ಮೋಹನ್ ಆಳ್ವರವರು ಬಿಡುಗಡೆಗೊಳಿಸಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಿರುವ ಪದ್ಮಶ್ರೀ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕರವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭ ಮರಾಠಿಗರ ಅಹವಾಲುಗಳನ್ನು ನಮ್ಮ ಸಮಾವೇಶದ ಗೌರವಾಧ್ಯಕ್ಷರಾದ ಡಾ.ಕೆ. ಸುಂದರ್ ನಾಯಕ್ ರವರು ಮುಖ್ಯಮಂತ್ರಿಗಳಿಗೆ ಅರ್ಪಿಸಲಿದ್ದಾರೆ. ಹಾಗೆಯೇ ರಾಷ್ಟ್ರಮಟ್ಟದಲ್ಲಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಸಮಾಜದ ಆನೇಕ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದರು.

ನ. 9ರಂದು ಕರ್ನಾಟಕ ಮರಾಠಿ ಸಂಘ (ರಿ.) ಬೆಂಗಳೂರು ಇವರ ಸಹಕಾರದಿಂದ ಮರಾಠಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು, ಈಗಾಗಲೇ 1500ಕ್ಕೂ ಹೆಚ್ಚು ಮರಾಠಿ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. 30ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಈ ಸಮಾವೇಶದ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ದೂರದ ಊರಿನ ಮರಾಟ ಬಂಧುಗಳಿಗೆ ವಸತಿ ವ್ಯವಸ್ಥೆ ಮತ್ತು  ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎಂ. ಮೋಹನ್ ಆಳ್ವ, ಎನ್.ಎಸ್. ಮಂಜುನಾಥ್, ರತಿ ಪ್ರಭಾಕರ ನಾಯ್ಕ, ಹಾಗೂ ಪ್ರವೀಣ್ ಕುಮಾರ್ ಮುಗುಳಿ ನಮ್ಮೊಂದಿಗೆ ಸಹಕರಿಸಲಿದ್ದಾರೆ.

 ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ. ಖಾದರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ಸೋಜ, ಮಾಜಿ ಸಚಿವರುಗಳಾದ ಕೆ. ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಡಾ. ಎಂ ಮೋಹನ್ ಆಳ್ವ, ಕೆನರಾ ಬ್ಯಾಂಕ್ ಜಿ.ಎಂ. ಶ್ರೀ ರಾಮ ನಾಯ್ಕ್, ದ.ಕ ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಡಾ.ಕೆ ಸುಂದರ್ ನಾಯಕ್, ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ, ರತ್ನಾವತಿ, ಎನ್. ವಿಶ್ವನಾಥ್ ನಾಯಕ್, ಮಹಾಲಿಂಗ ನಾಯಕ್, ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2