• Home  
  • ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ (Panchvarna Asadi Odr : Radio Kundapra Jyoti Saligrama selected for Sadhaka Mahila Puraskar)
- Uncategorised - ಸನ್ಮಾನ, ಅಭಿನಂದನೆ

ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ (Panchvarna Asadi Odr : Radio Kundapra Jyoti Saligrama selected for Sadhaka Mahila Puraskar)

Share: ಪಂಚವರ್ಣ ಆಸಾಡಿ ಒಡ್ರ್ :  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆ ಅಗಸ್ಟ್ 9 ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Kota) ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಂಡಿದ್ದಾರೆ.   ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 […]

(Kota) ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಂಡಿದ್ದಾರೆ. 

 ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ   “ಕುಂದಾಪ್ರ ಕನ್ನಡ ದಿನ”ದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು.

 ವಿಶೇಷ ಆಹ್ವಾನಿತರಾಗಿ ಕುಂದಗನ್ನಡ ರಾಯಬಾರಿ ಮನು ಹಂದಾಡಿ (ಮನೋಹರ್ ಶೆಟ್ಟಿ)  ಭಾಗವಹಿಸಲಿದ್ದಾರೆ.

 ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ,   ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

   ಸ್ನೇಹಕೂಟ ಮಣೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.