• Home  
  • ಪಡುಬಿದ್ರಿ: ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ (Padubidri: Bhoomi Pooja for Inter State Banta Sports Fastival)
- ಕ್ರೀಡೆ - ವಿಡಿಯೋ

ಪಡುಬಿದ್ರಿ: ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ (Padubidri: Bhoomi Pooja for Inter State Banta Sports Fastival)

Share:  ಪಡುಬಿದ್ರಿ: ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ (Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಡಿಸೆಂಬರ್ 29 ರಂದು ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಭಾವ್ಯ ಪೆಟ್ರೋಲ್ ಬಂಕ್ ಸಮೀಪದ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಾರಾಜ್ಯ ಬಂಟ ಕ್ರೀಡೋತ್ಸವ-2024 ಎಮ್‌ಆರ್‌ಜಿ ಟ್ರೋಫಿ ಕ್ರೀಡೋತ್ಸವದ ಪೂರ್ವಭಾವಿಯಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಲಾಯಿತು. ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್‌ಫೇರ್ ಟ್ರಸ್ಟ್, ಬಂಟರ ಕ್ರೀಡಾ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕ್ರೀಡೋತ್ಸವದ ಭೂಮಿ ಪೂಜೆಯನ್ನು […]

 ಪಡುಬಿದ್ರಿ: ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ

(Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಡಿಸೆಂಬರ್ 29 ರಂದು ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಭಾವ್ಯ ಪೆಟ್ರೋಲ್ ಬಂಕ್ ಸಮೀಪದ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಾರಾಜ್ಯ ಬಂಟ ಕ್ರೀಡೋತ್ಸವ-2024 ಎಮ್‌ಆರ್‌ಜಿ ಟ್ರೋಫಿ ಕ್ರೀಡೋತ್ಸವದ ಪೂರ್ವಭಾವಿಯಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್‌ಫೇರ್ ಟ್ರಸ್ಟ್, ಬಂಟರ ಕ್ರೀಡಾ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕ್ರೀಡೋತ್ಸವದ ಭೂಮಿ ಪೂಜೆಯನ್ನು ಪುಣೆ ಹೋಟೆಲ್ ಉದ್ಯಮಿ ಎರ್ಮಾಳು ಪುಚ್ಚೊಟ್ಟು ಚಂದ್ರಹಾಸ ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು.

 ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಕ್ರೀಡೋತ್ಸವದಲ್ಲಿ ಇತರ ರಾಜ್ಯಗಳ ಬಂಟರ ಸಂಘಗಳ ತಂಡಗಳು ಪಾಳ್ಗೊಳ್ಳಲಿದೆ. ಕ್ರೀಡೋತ್ಸವವನ್ನು ಸುವ್ಯಸ್ಥಿತವಾಗಿ ನಡಸಲು ತೀರ್ಮಾನಿಸಲಾಗಿದ್ದು, ಉಪ ಸಮಿತಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಪಡುಬಿದ್ರಿ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಎರ್ಮಾಳು ಶಶಿಧರ್ ಶೆಟ್ಟಿ, ಬಂಟರ ಸಂಘದ ಪೂರ್ವಾಧ್ಯಕ್ಷರುಗಳಾದ ಗುಂಡ್ಲಾಡಿ ಸುರೇಶ್ ಶೆಟ್ಟಿ ಮತ್ತು ನವೀನ್‌ಚಂದ್ರ ಜೆ. ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಯುವ ವಿಭಾಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ, ಕ್ರೀಡಾ ಸಂಚಾಲಕ ವಿನಯ ಶೆಟ್ಟಿ, ಕ್ರೀಡಾ ಸಂಯೋಜಕರಾದ ಶರತ್ ಶೆಟ್ಟಿ, ಸಹ ಸಂಚಾಲಕರಾದ ಹರೀಶ್ ಶೆಟ್ಟಿ ಅವರಾಲು ಮತ್ತು ಸುನಿಲ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶರ್ಮಿಳಾ ಆರ್.ಶೆಟ್ಟಿ, ಹರೀಶ್ ಶೆಟ್ಟಿ ಪಾದೆಬೆಟ್ಟು, ಶಿವಪ್ರಸಾದ್ ಶೆಟ್ಟಿ, ಮಾಧವ ಶೆಟ್ಟಿ, ಜಯ ಶೆಟ್ಟಿ ಪದ್ರ, ಸುಧಾಕರ ಶೆಟ್ಟಿ, ಶೋಭಾ ಜೆ. ಶೆಟ್ಟಿ, ಅಕ್ಷತಾ ಶೆಟ್ಟಿ, ರಾಧೇಶ್ ಶೆಟ್ಟಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.