• Home  
  • ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Tollgate proposed to be constructed at Kanchinadka : Trouble for officials)
- PROBLEMS - protest

ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Tollgate proposed to be constructed at Kanchinadka : Trouble for officials)

Share: ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ (Padubidri) ಪಡುಬಿದ್ರಿ: ಪಡುಬಿದ್ರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್‌ನ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ಆಕ್ರೋಶಿತ ಟೋಲ್ ವಿರೋಧಿ ಹೋರಾಟ ಸಮಿತಿಯ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಘಟಿಸಿದೆ. ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್‌ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಎಕ್ಸಿಕ್ಯೂಟಿವ್ ಎಂಜಿನಿಯರ್ ರಘು ಎಲ್ ಹಾಗೂ ಸಹಾಯಕ ಎಂಜಿನೀಯರ್ ಹೇಮಂತ್ ಕುಮಾರ್  ಆಗಮಿಸಿದ್ದರು. […]

ಪಡುಬಿದ್ರಿ: ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್, ಅಧಿಕಾರಿಗಳಿಗೆ ತರಾಟೆ

(Padubidri) ಪಡುಬಿದ್ರಿ: ಪಡುಬಿದ್ರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್‌ನ ಪರಿಶೀಲನೆಗೆ ಆಗಮಿಸಿದ್ದ ಅಧಿಕಾರಿಗಳನ್ನು ಆಕ್ರೋಶಿತ ಟೋಲ್ ವಿರೋಧಿ ಹೋರಾಟ ಸಮಿತಿಯ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ಘಟಿಸಿದೆ.

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಟೋಲ್ ಗೇಟ್‌ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಎಕ್ಸಿಕ್ಯೂಟಿವ್ ಎಂಜಿನಿಯರ್ ರಘು ಎಲ್ ಹಾಗೂ ಸಹಾಯಕ ಎಂಜಿನೀಯರ್ ಹೇಮಂತ್ ಕುಮಾರ್  ಆಗಮಿಸಿದ್ದರು.

ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಕಂಚಿನಡ್ಕ ಪ್ರದೇಶಕ್ಕೆ ಬರುವ ಬಗ್ಗೆ ಮಾಹಿತಿ ತಿಳಿದ ಟೋಲ್ ವಿರೋಧಿ ಹೋರಾಟಗಾರರು ಸ್ಥಳದಲ್ಲಿ ಜಮಾವಣೆಗೊಂಡಿದ್ದರು.

  ಅಧಿಕಾರಿಗಳು ಟೋಲ್‌ವಿರೋಧಿ ಮುಖಂಡರೊಂದಿಗೆ ಟೋಲ್‌ನ ವಿವರವನ್ನು ನೀಡಿದರು. ಈ ವೇಳೆ ಯಾವುದೇ ಕಾರಣಕ್ಕೂ ಇಲ್ಲಿ ಟೋಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ಘಟಿಸಿದೆ.

  ಟೋಲ್‌ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಸಿಬ್ಬಂದಿಗಳು ಮತ್ತು ಟೋಲ್‌ವಿರೋಧಿ ಹೋರಾಟಗಾರ ಮಧ್ಯೆ ಮಾತಿನ ಚಕಮಕಿ ನಡೆಯಿತು.

 ಈ ವೇಳೆ ಹೋರಾಟಗಾರರು ಟೋಲ್ ಕಂಪೆನಿ ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಅಲ್ಲಿಂದ ಅಟ್ಟಾಡಿಸಿ ಓಡಿಸಿದರು. ಬಳಿಕ ಅಲ್ಲಿಗೆ ಆಗಮಿಸಿದ ಪೊಲೀಸರು ಅವರನ್ನು ಕಾರಿನಲ್ಲಿ ಅಲ್ಲಿಂದ ತೆರಳುವಂತೆ ಸೂಚಿಸಿದರು.

ಅಧಿಕಾರಿಗಳು ಟೋಲ್‌ಹೋರಾಟಗಾರರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದಾದರೂ, ಟೋಲ್ ವಿರೋಧಿ ಹೋರಾಟಗಾರರು ಯಾವುದೇ ಕಾರಣಕ್ಕೂ ಇಲ್ಲಿ ಟೋಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದರು.

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜೊತೆ ಟೋಲ್ ವಿರೋಧ ಹೋರಾಟ ಸಮಿತಿಯ ಸುಹಾಸ್ ಹೆಗ್ಡೆ ಮಾತನಾಡಿ, ಟೋಲ್‌ನಿರ್ಮಾಣ ಪ್ರಸ್ತಾವನೆ ಇಲ್ಲಿಗೆ ಕೈಬಿಡಬೇಕು ಎಂದು ಒತ್ತಾಯಿಸಿದ್ದು, ಒಂದು ವಾರದೊಳಗಡೆ ಬೃಹತ್ ಮಟ್ಟದ ಪ್ರತಿಭಟನೆಯನ್ನು ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭ ಅಶೋಕ್‌ ಶೆಟ್ಟಿ, ನವೀನ್‌ಚಂದ್ರ ಜೆ ಶೆಟ್ಟಿ, ಮಿಥುನ್‌ ಹೆಗ್ಡೆ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು ಸಹಿತ ನೂರಾರು ಮಂದಿ ಸ್ಥಳೀಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.