ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ
ಪಡುಬಿದ್ರಿ: ಪಡುಬಿದ್ರಿ ಸಮುದ್ರತೀರದ ಮಧ್ವನಗರ ಪ್ರದೇಶದಲ್ಲಿ ಮಾವು , ಹಲಸು , ಸಾಗವಾನಿ ಮೊದಲಾದ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಗಣಪತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಸಸ್ಯಗಳನ್ನು ಒದಗಿಸಿಕೊಟ್ಟರು.
ವನಮಹೋತ್ಸವ ಕಾರ್ಯಕ್ರಮದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಜಾತಾ ಆಚಾರ್, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಧರ ಆಚಾರ್, ಮಕರಂದ , ರಮಾಕಾಂತ ರಾವ್ , ಶರತ್ ಕುಮಾರ್ ಉಪಸ್ಥಿತರಿದ್ದು ಸಹಕರಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತಾದ ಘೋಷಣೆಗಳನ್ನು ಬರೆಯುವ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಅಭಿನಂದಿಸಲಾಯಿತು.

