ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಶಿಕ್ಷಾ ಸಪ್ತಾಹ ಮತ್ತು ಕಾನೂನು ಅರಿವು ಕಾರ್ಯಕ್ರಮ
(Padubidri) ಪಡುಬಿದ್ರಿ: ವಿದ್ಯಾರ್ಥಿಗಳು ಬದುಕಿನುದ್ದಕ್ಕೂ ಮಾದಕ ವ್ಯಸನದಿಂದ ದೂರವಿರುವ ಮೂಲಕ ಆರೋಗ್ಯಪೂರ್ಣ ಜೀವನ ನಡೆಸಬೇಕು ಅಂತೆಯೇ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಾರಣರಾಗಬೇಕೆಂದು ಪಡುಬಿದ್ರಿ ಠಾಣಾ ಎಸ್‌ಐ ಸುರೇಶ ಭಟ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅವರು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಾ ಸಪ್ತಾಹ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ, ಬಾಲ್ಯವಿವಾಹ ನಿಷೇಧ ಕಾನೂನು ಮತ್ತು ಮಾದಕ ದ್ರವ್ಯ ಮುಕ್ತ ಪರಿಸರ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉಪನ್ಯಾಸ ನೀಡಿದರು.
ಆರಕ್ಷಕ ಠಾಣೆಯ ಸುದೇಶ ಶೆಟ್ಟಿ ವೇದಿಕೆಯಲ್ಲಿಉಪಸ್ಥಿತರಿದ್ದರು.
ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನುರಾಧಾ ಪಿ.ಎಸ್. ಸ್ವಾಗತಿಸಿದರು.
ಆಂಗ್ಲ ಭಾಷಾ ಶಿಕ್ಷಕಿ ಕುಮಾರಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಅಶೋಕ ಕೆ. ವಂದಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು , ಶಿಕ್ಷಕರು ಉಪಸ್ಥಿತರಿದ್ದರು.

