• Home  
  • ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ (Padubidri Grameena Congress Committee protests against the failure of the central government)
- ರಾಜಕೀಯ - ವಿಡಿಯೋ - ಸಂಘ, ಸಂಸ್ಥೆಗಳು

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ (Padubidri Grameena Congress Committee protests against the failure of the central government)

Share: ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ (Padubidri) ಪಡುಬಿದ್ರಿ: ಕರ್ನಾಟಕ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯು ಸುಳ್ಳು ಆರೋಪ ಮಾಡುತ್ತಿರುವುದು ಮತ್ತು ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಗುರುವಾರ ಪಡುಬಿದ್ರಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಕರುಣಾಕರ ಪೂಜಾರಿ ಅವರ ಆಯೋಜನೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು.    ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷದ […]

(Padubidri) ಪಡುಬಿದ್ರಿ: ಕರ್ನಾಟಕ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯು ಸುಳ್ಳು ಆರೋಪ ಮಾಡುತ್ತಿರುವುದು ಮತ್ತು ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಗುರುವಾರ ಪಡುಬಿದ್ರಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಕರುಣಾಕರ ಪೂಜಾರಿ ಅವರ ಆಯೋಜನೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು.

   ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಗ್ರಾಮಸ್ಥರಿಗೆ ಇದರ ಬಗ್ಗೆ ಸತ್ಯ ತಿಳುವಳಿಕೆಯನ್ನು  ನೀಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಕೈಗೊಂಡು, ಹದಿನಾರು ಪಂಚಾಯತ್ ಗಳಲ್ಲಿ  ಬಿಜೆಪಿಯವರ ಸುಳ್ಳು ಮತ್ತು ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ಮಾಡುವುದರ ಮುಖೇನ ನೈಜತೆಯನ್ನು ಜನತೆಯ ಮುಂದೆ ಇಡುವ ಕೆಲಸವನ್ನು ಮಾಡುತ್ತಿದ್ದೇವೆ.

ಕೊರೋನ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರಕಾರ ವೈಫಲ್ಯ ಕಂಡಿದೆ. ಇನ್ನು ಮುಂದೆಯಾದರೂ ಜನ ಸಾಮಾನ್ಯರಿಗೆ ಜಿಎಎಸ್‌ ಹೇರದೆ ಸುಳ್ಳುಗಳನ್ನು ಬಿಟ್ಟು ಸರಿಯಾಗಿ ಸರಕಾರ ನಡೆಸಿ. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಪ್ರತಿಭಟನಾ ಸಭೆ ಆಯೋಜಿಸಿದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಸರಕಾರದ ಜೋಡೆತ್ತು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನುಡಿದಂತೆ ಪಂಚ ಗ್ಯಾರಂಟಿಯನ್ನು ಅನುಷ್ಠಾನಕ್ಕೆ ತಂದು ಜನರ ಮನವನ್ನು ಗೆದ್ದಿದ್ದಾರೆ. ಈ ಗ್ಯಾರಂಟಿಯಿಂದಾಗಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದನ್ನು ಸಹಿಸಲಾಗದೆ ಬಿಜೆಪಿ ಪಕ್ಷದವರು ಕಕ್ಕಾಬಿಕ್ಕಿಯಾಗಿ ಏನು ಮಾಡಲು ತೋಚದೆ ಕಾಂಗ್ರೆಸ್ ಪಕ್ಷದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.    ಕುಣಿಯಲು ಬಾರದವನು ನೆಲ ಡೊಂಕು ಎಂಬ ಗಾದೆಯ ಮಾತನ್ನು ವಿಶ್ಲೇಷಿಸಿ ಕಾಪು ಶಾಸಕರಿಗೆ ತಿರುಗೇಟು ನೀಡಿದರು.

 ಪ್ರತಿಭಟನೆಯಲ್ಲಿ ಕೆಪಿಸಿಸಿ ಕೊರ್ಡಿನೇಟರ್ ನವೀನ್ ಚಂದ್ರ ಶೆಟ್ಟಿ, ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಚಿರಿತ ಎಲ್‌ ಅಮೀನ್‌, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ ನಿಯಾಝ್, ಗಣೇಶ್‌ ಕೋಟ್ಯಾನ್‌ ಪಡುಬಿದ್ರಿ, ನವೀನ್‌ ಎನ್‌ ಶೆಟ್ಟಿ, ವಿಶ್ವಾಸ್‌ ವಿ ಅಮೀನ್, ಜ್ಯೋತಿ ಮೆನನ್‌, ಕಾಪು ದಿವಾಕರ ಶೆಟ್ಟಿ ಮತ್ತು ಕಾಂಗ್ರೆಸ್  ಸದಸ್ಯರುಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.