ಪಡುಬಿದ್ರಿ : ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು
ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ (22) ಮೃತ ಯುವತಿ
(Padubidri) ಪಡುಬಿದ್ರಿ : ಇಲ್ಲಿನ ಬಸ್ ನಿಲ್ದಾಣದ ಬಳಿ ಟೆಂಪೋ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವತಿ ಪ್ರೇಕ್ಷಾ (22) ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿಯಾಗಿದ್ದು, ವಾಮಂಜೂರಿನ ಕರಾವಳಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಪರೀಕ್ಷೆ ಮುಗಿಸಿ ಮನೆಯತ್ತ ಹೊರಟ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರು ಕಡೆಗೆ ಹೋಗುವ ಸರ್ವಿಸ್ ರಸ್ತೆಯಲ್ಲಿ ಉಡುಪಿ ಕಡೆಯಿಂದ ವೇಗವಾಗಿ ಮುನ್ನುಗ್ಗಿ ಬಂದ ಗೂಡ್ಸ್ ಟೆಂಪೋ ಡಿಕ್ಕಿಯಾಗಿತ್ತು.
ಪಡುಬಿದ್ರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು.
ತೀರಾ ಬಡ ಕುಟುಂಬದ ಆಕೆ ತಂದೆಯನ್ನು ಕಳೆದುಕೊಂಡಿದ್ದರು. ಅವರಿಗೆ ತಾಯಿ, ಸಹೋದರ ಇದ್ದಾರೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

