ಪಡುಬಿದ್ರಿ ನಡಿಪಟ್ಣ ಕಡಲ್ಕೊರೆತ – ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ, ಪರಿಶೀಲನೆ (Kaup MLA Gurme Suresf Shetty visit Padubidri Nadipatna)
ಪಡುಬಿದ್ರಿ ನಡಿಪಟ್ಣ ಕಡಲ್ಕೊರೆತ – ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ, ಪರಿಶೀಲನೆ
(Padubidri) ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಣ ಪರಿಸರದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಡಾ. ಪ್ರತಿಭಾ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾ ಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಅಭಿಯಂತರರಾದ ಜಯರಾಜ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.