ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ (Ayudha Pooja Celebration at Padubidri police station)
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ
(Padubidri) ಪಡುಬಿದ್ರಿ: ಪಡುಬಿದ್ರಿಯ ಪೊಲೀಸ್ ಠಾಣೆಯಲ್ಲಿ ವರ್ಷಂಪ್ರತಿಯಂತೆ ಈ ಬಾರಿಯೂ ನವರಾತ್ರಿಯ ಸಂದರ್ಭ ಆಯುಧ ಪೂಜೆ ವಿಜ್ರಂಬಣೆಯಿಂದ ನಡೆಯಿತು.
ಆಯುಧ ಪೂಜೆಯ ಸಂದರ್ಭ ಪೊಲೀಸ್ ಠಾಣೆ ವಿದ್ಯುತ್ ದೀಪ ಹಾಗೂ ವಿವಿಧ ಬಗೆಯ ಹೂ ಗಳಿಂದ ಅಲಂಕಾರಗೊಂಡಿದ್ದು, ನೋಡುಗರನ್ನು ಆಕರ್ಷಿಸುವಂತಿತ್ತು.
ಈ ಬಗ್ಗೆ ಮಾತನಾಡಿದ ಪಡುಬಿದ್ರಿ ಎಸ್ ಐ ಪ್ರಸನ್ನ, ಪಡುಬಿದ್ರಿ ಠಾಣೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಾರ್ವಜನಿಕರನ್ನು ಸೇರಿಸಿಕೊಂಡು, ಗುರುರಾಜ್ ಭಟ್ ಎರ್ಮಾಳು ಇವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ ಹಾಗೂ ಆಯುಧ ಪೂಜೆಯನ್ನು ನಡೆಸಲಾಗಿದೆ ಎಂದರು.
ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿಗಳಾದ ನವೀನ್ ಚಂದ್ರ ಜೆ. ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ದೀಪಕ್ ಕೋಟ್ಯಾನ್ ಇನ್ನ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಉಚ್ಚಿಲ, ದೀಪಕ್ ಬೀರ ಪಡುಬಿದ್ರಿ, ಸುರೇಶ್ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.