ಪಡುಬಿದ್ರಿ ಪ್ರಸನ್ನ ಪಾರ್ವತಿ ದೇವಸ್ಥಾನದ ಸಭಾಂಗಣ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ
ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾ. ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಯೋಜನಾಧಿಕಾರಿ ಮಮತಾ ಶೆಟ್ಟಿ
ಪಡುಬಿದ್ರಿ : ಪಡುಬಿದ್ರಿ ಶ್ರೀಪ್ರಸನ್ನ ಪಾರ್ವತಿ ದೇವಸ್ಥಾನ ಉದಯಗಿರಿ ಇದರ ಸಭಾಂಗಣ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ 3 ಲಕ್ಷ ರೂ. ಅನುದಾನದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಹಸ್ತಾಂತರಿಸಿದರು.
ದೇವಸ್ಥಾನದ ಪ್ರದಾನ ಅರ್ಚಕ ಜಗದಾಭಿರಾಮ, ಚಂದ್ರಶೇಖರ ರಾವ್, ವಲಯಾಧ್ಯಕ್ಷ ಭುಜಂಗ ಆಚಾರ್ಯ, ದೇವಸ್ಥಾನ ಆಡಳಿತ ಮಂಡಳಿಯ ಶ್ರೀನಿವಾಸ ಶರ್ಮ, ಜನಾರ್ದನ ರಾವ್, ನಯನಾಭಿರಾಮ ಸ್ವಾಮಿ, ಜೊತೆ ಕಾರ್ಯದರ್ಶಿ ಶಶಿಕಾಂತ್ ಪಡುಬಿದ್ರಿ, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

