ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ
(Padubidri) ಪಡುಬಿದ್ರಿ : ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಗೆ ಖನಿಜ ಪ್ರತಿಷ್ಠಾನ ನಿಧಿಯಿಂದ 8 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ (EX MLA Lalaji Mendon), ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಭವಾನಿ ಶ್ರೀಯಾನ್, ಶೋಭಾ ಶೆಟ್ಟಿ, ಸಂದೇಶ್ ಶೆಟ್ಟಿ, ಅಶೋಕ್ ಪೂಜಾರಿ, ಹರೀಶ್ ಶೆಟ್ಟಿ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಬ್ರಮಣ್ಯ ರಾವ್ ಉಪಸ್ಥಿತರಿದ್ದರು.

