ಪಡುಬಿದ್ರಿ ಬಂಟರ ಭವನದಲ್ಲಿ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by the Women’s Division at Padubidri Buntara Bhavan)

ಪಡುಬಿದ್ರಿ ಬಂಟರ ಭವನದಲ್ಲಿ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ
(Padubidri)ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘದ ಬಂಟರ ಮಹಿಳಾ ವಿಭಾಗದಿಂದ ಶನಿವಾರ ಪಡುಬಿದ್ರಿ ಬಂಟರ ಭವನದಲ್ಲಿ ಆಯೋಜಿಸಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮವನ್ನು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ, ಮಾತೃ ಪ್ರಧಾನ ಭಾರತದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗಬೇಕು. ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಿದಾಗ ಜೀವನದಲ್ಲಿ ಯಶಶ್ಸು ಖಚಿತ ಎಂದು ಹೇಳಿದರು.
ಎಮ್‌ಆರ್‌ಪಿಎಲ್ ನಿವೃತ್ತ ಮಹಾಪ್ರಬಂಧಕಿ ವೀಣಾ ಟಿ. ಶೆಟ್ಟಿ ಕಾರ್ಯಕ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮಹತ್ವದ ಬಗ್ಗೆ ದಿಕ್ಸೂಚಿ ಭಾಷಣಗೈದರು.
ಸನ್ಮಾನ: ಯಕ್ಷಗಾನ ಕ್ಷೇತ್ರದ ಮಹಿಳಾ ಸಾಧಕಿ, ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಪೂರ್ಣಿಮಾ ಯತೀಶ್ ರೈಯವರನ್ನು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು.
ಬಂಟರ ಮಹಿಳಾ ವಿಭಾಗದ ಉಪಾಧ್ಯಕ್ಷೆ ಭಾರತಿ ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ವೈ.ಶಶಿಧರ್ ಶೆಟ್ಟಿ, ಬಂಟರ ಸಂಘದ ಉಪಾಧ್ಯಕ್ಷೆ ಅನಿತಾ ವಿಶುಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ ಮುಖ್ಯ ಅತಿಥಿಗಳಾಗಿದ್ದರು.
ಈ ಸಂದರ್ಭ ಮಹಿಳೆಯರಿಗಾಗಿ ಹಮ್ಮಿಕೊಂಡ ನಾನಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯದರ್ಶಿ ವಾಣಿ ರವಿ ಶೆಟ್ಟಿ ಸ್ವಾಗತಿಸಿದರು.
ಕೋಶಾಧಿಕಾರಿ ರಶ್ಮಿ ಸುಧಾಕರ ಶೆಟ್ಟಿ ವಂದಿಸಿದರು. ಮಾಜಿ ಅಧ್ಯಕ್ಷೆ ಅಕ್ಷತಾ ಸುರೇಂದ್ರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.