ಪಡುಬಿದ್ರಿ ಬಂಟರ ಭವನದ ಬಳಿ ರಾಷ್ಟಿçÃಯ ಹೆದ್ದಾರಿ ೬೬ರ ಬದಿಯಲ್ಲಿ ನಿರ್ಮಾಣಗೊಂಡ ಅರೆಬರೆ ಡ್ರೆÊನೇಜ್ ಕಾಮಗಾರಿ ಮತ್ತು ಅಪಘಾತ ತಾಣವಾಗಿರುವ, ರಾಷ್ಟಿçÃಯ ಹೆದ್ದಾರಿ ೬೬ರ ಪಡುಬಿದ್ರಿ ಜಂಕ್ಷನ್ ಸಮಸ್ಯೆಗಳ ಬಗ್ಗೆ ಪರಿಶೀಲಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭಾನುವಾರ ಭೇಟಿ ನೀಡಿದರು.
ಹೆಚ್ಚುತ್ತಿರುವ ಅಪಘಾತಗಳು, ವಾಹನ ಸವಾರರು, ನಾಗರೀಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಥಳೀಯರು ಸಚಿವರ ಗಮನಕ್ಕೆ ತಂದಿದ್ದು, ಪರಿಹಾರವನ್ನು ಕಂಡುಕೊಳ್ಳಬೇಕಾದ ಅವಶ್ಯಕತೆ ಹಾಗೂ ಜನತೆಗೆ ಸುರಕ್ಷತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅನಿವಾರ್ಯತೆಯ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಅವರ ಗಮನ ಸೆಳೆದರು.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಶೀಲನೆಯನ್ನು ನಡೆಸಲಾಗಿದೆ. ಎನ್‌ಎಚ್ ಇಲಾಖೆಯ ಅಧಿಕಾರಗಳ ವಿವೇಚನೆಯಂತೆ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಸೂಚನೆಯನ್ನು ನೀಡಲಾಗುತ್ತದೆ ಎಂದರು. ಈ ಸಂದರ್ಭ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಮಾಜಿ ಉಡುಪಿ ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ರಮಾಕಾಂತ್ ದೇವಾಡಿಗ, ಪ್ರಮುಖರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಶರತ್ ಶರ್ಮಾ ಉಪಸ್ಥಿತರಿದ್ದರು.

