ಪಡುಬಿದ್ರಿ ಮಹಾಶಕ್ತಿ ಕೇಂದ್ರದಿಂದ ವಿಧಾನ ಪರಿಷತ್ ಚುನಾವಣೆ, ಬಿಜೆಪಿ ಸದಸ್ಯತ್ವ ನೋಂದಣಿ ಪೂರ್ವಭಾವಿ ಸಭೆ
(Padubidri) ಪಡುಬಿದ್ರಿ ; ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಾಗೂ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿಯಾಗಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಹಿಸಿದ್ದರು.
ಅವರು ಮಾತನಾಡಿ, ಭಾರತೀಯ ಜನತಾ ಪಾರ್ಟಿಯು ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದ ಶಾಸಕರು, ಈಗಾಗಲೇ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ನಡೆಯುತ್ತಿದೆ. ಕಾಪು ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗರಿಷ್ಠ ಸದಸ್ಯತ್ವ ನೋಂದಣಿ ಮಾಡುವ ಮೂಲಕ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿ ಕುಟುಂಬದ ಸದಸ್ಯರನನ್ನಾಗಿ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಎಲ್ಲದಡಿ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ದೇವಾಡಿಗ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಶಕ್ತಿ ಕೇಂದ್ರದ ಸಂಚಾಲಕರು, ಸಹ ಸಂಚಾಲಕರು, ಜನಪ್ರತಿನಿಧಿಗಳು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

