• Home  
  • ಪಡುಬಿದ್ರಿ ಯುವವಾಹಿನಿ ‌ಘಟಕದ ಕುಟುಂಬ ‌ಕಲರವ – 2023 ಸಂಪನ್ನ
- ಕರಾವಳಿ

ಪಡುಬಿದ್ರಿ ಯುವವಾಹಿನಿ ‌ಘಟಕದ ಕುಟುಂಬ ‌ಕಲರವ – 2023 ಸಂಪನ್ನ

Share: ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ ಕುಟುಂಬದ ಸದಸ್ಯರಿಗಾಗಿ ನಡೆದ ಕುಟುಂಬ ಕಲರವ – 2023   ಪಡುಬಿದ್ರಿ ಸುಜ್ಲಾನ್ ಕಾಲೋನಿಯ ಸಭಾಗೃಹದಲ್ಲಿ ಜರಗಿತು.  ಮುಖ್ಯ ಅತಿಥಿಯಾಗಿ ‌ಆಗಮಿಸಿದ ಪಡುಬಿದ್ರಿ ಕೆನರಾ ಬ್ಯಾಂಕ್ ಪ್ರಬಂಧಕಿ ಸೌಮ್ಯ ನಿತೇಶ್ ಮಾತನಾಡಿ, ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಗಟ್ಟಿಯಾಗಲು ಕುಟುಂಬ ಕಲರವದಂತಹ ಕಾರ್ಯಗಳು ಅನಿವಾರ್ಯ. ಹಿರಿಯರ ಜೊತೆ ಕಿರಿಯರು ಸೇರಿದಾಗ ಸಂಸ್ಥೆಯ ಭವಿಷ್ಯಕ್ಕೆ ಅದು ಭದ್ರಬುನಾದಿ. ಯುವವಾಹಿನಿ ಪಡುಬಿದ್ರಿ ಘಟಕದಿಂದ ಇನ್ನಷ್ಟು ಕಾರ್ಯಗಳು ನಡೆಯಲಿ ಎಂದರು.  ಈ ಸಂದರ್ಭ ಎಸ್ಸೆಸ್ಸೆಲ್ಸಿ […]

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ ಕುಟುಂಬದ ಸದಸ್ಯರಿಗಾಗಿ ನಡೆದ ಕುಟುಂಬ ಕಲರವ – 2023   ಪಡುಬಿದ್ರಿ ಸುಜ್ಲಾನ್ ಕಾಲೋನಿಯ ಸಭಾಗೃಹದಲ್ಲಿ ಜರಗಿತು.

 ಮುಖ್ಯ ಅತಿಥಿಯಾಗಿ ‌ಆಗಮಿಸಿದ ಪಡುಬಿದ್ರಿ ಕೆನರಾ ಬ್ಯಾಂಕ್ ಪ್ರಬಂಧಕಿ ಸೌಮ್ಯ ನಿತೇಶ್ ಮಾತನಾಡಿ, ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಗಟ್ಟಿಯಾಗಲು ಕುಟುಂಬ ಕಲರವದಂತಹ ಕಾರ್ಯಗಳು ಅನಿವಾರ್ಯ. ಹಿರಿಯರ ಜೊತೆ ಕಿರಿಯರು ಸೇರಿದಾಗ ಸಂಸ್ಥೆಯ ಭವಿಷ್ಯಕ್ಕೆ ಅದು ಭದ್ರಬುನಾದಿ. ಯುವವಾಹಿನಿ ಪಡುಬಿದ್ರಿ ಘಟಕದಿಂದ ಇನ್ನಷ್ಟು ಕಾರ್ಯಗಳು ನಡೆಯಲಿ ಎಂದರು.

 ಈ ಸಂದರ್ಭ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಘಟಕದ ಸುದೀಪ್ ಎಸ್ ಕೋಟ್ಯಾನ್ ಮತ್ತು ಸ್ನೇಹರನ್ನು ಸನ್ಮಾನಿಸಲಾಯಿತು.

ಯುವವಾಹಿನಿ ಘಟಕದ ಕುಟುಂಬದ ಸದಸ್ಯರಿಗಾಗಿ ನಡೆದ ವಿವಿಧ ಮನೋರಂಜನಾತ್ಮಕ ಆಟಗಳ ಬಹುಮಾನ ವಿತರಿಸಲಾಯಿತು.

 ಪಡುಬಿದ್ರಿ ಘಟಕದ ಉಪಾಧ್ಯಕ್ಷರಾದ ಅಶ್ವಥ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಗೌರವ ಸಲಹೆಗಾರರಾದ ಡಾ. ಎನ್. ಟಿ. ಅಂಚನ್, ಕಾರ್ಯಕ್ರಮ ಸಂಚಾಲಕ ಪ್ರಜ್ವಲ್, ಘಟಕದ ಕಾರ್ಯದರ್ಶಿ ಡಾ. ಐಶ್ವರ್ಯ ಸಿ ಅಂಚನ್ ಉಪಸ್ಥಿತರಿದ್ದರು.

 ಪಡುಬಿದ್ರಿ ಘಟಕದ ಸದಸ್ಯೆ ಸುಗಂಧಿ ಶ್ಯಾಮ್ ಪ್ರಾರ್ಥಿಸಿದರು. ಘಟಕದ ಮಾಜಿ ಅಧ್ಯಕ್ಷ ಸುಜಿತ್ ಕುಮಾರ್ ಪ್ರಸ್ತಾವಿಸಿದರು. ಮಾಜಿ ಅಧ್ಯಕ್ಷರಾದ ರವಿರಾಜ್ ಎನ್. ಕೋಟ್ಯಾನ್ ಮತ್ತು ಜೊತೆ ಕಾರ್ಯದರ್ಶಿ ಪೂರ್ಣಿಮ ವಿಧಿತ್ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಪ್ರಜ್ವಲ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.