• Home  
  •   ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ (Padubidri Airport: Letter from Aviation Minister to MP Kota)
- Breaking News

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ (Padubidri Airport: Letter from Aviation Minister to MP Kota)

Share:   ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ     ಮತ್ತೆ ಮುನ್ನೆಲೆಗೆ ಬಂದ ಪಡುಬಿದ್ರಿ ವಿಮಾನ ನಿಲ್ದಾಣದ ಕನಸು (Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರಿ ಬಳಿಯ ಎರ್ಮಾಳಿನಲ್ಲಿ ಪ್ರಸ್ತಾಪಿಸಲಾದ ವಿಮಾನ ನಿಲ್ದಾಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಾಪು […]

(Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರಿ ಬಳಿಯ ಎರ್ಮಾಳಿನಲ್ಲಿ ಪ್ರಸ್ತಾಪಿಸಲಾದ ವಿಮಾನ ನಿಲ್ದಾಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆ

  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.

    ಈ ಬಗ್ಗೆ ಸಚಿವರು ಸಂಸದರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿದೆ. ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.

   ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟರವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

    ಇದರಿಂದ ಉಡುಪಿ‌ ಜಿಲ್ಲೆಯ ಎರ್ಮಾಳಿನಲ್ಲಿ ಪ್ರಸ್ತಾಪಿತ ವಿಮಾನ ನಿಲ್ದಾಣದ ಬಗ್ಗೆ ಜಿಲ್ಲೆಯ ಜನರ ಕನಸು ಗರಿಗೆದರಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.