• Home  
  •  ಪಡುಬಿದ್ರಿ : ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ (Padubidri: Free eye check-up camp organized by various organizations)
- social service

 ಪಡುಬಿದ್ರಿ : ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ (Padubidri: Free eye check-up camp organized by various organizations)

Share: PHOTO CREDIT RAVI DIGITALS PADUBIDRI ಪಡುಬಿದ್ರಿ : ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್‌ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವರ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಭಾಭವನದಲ್ಲಿ ಶುಕ್ರವಾರ ನೆರವೇರಿತು. […]

(Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್‌ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವರ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಭಾಭವನದಲ್ಲಿ ಶುಕ್ರವಾರ ನೆರವೇರಿತು.

ಕಾರ್ಯಕ್ರಮವನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ ಸುಧೀರ್‌ ಕುಮಾರ್‌ ಉದ್ಘಾಟಿಸಿದರು.

ಅವರು ಈ ಸಂದರ್ಭ ಮಾತನಾಡಿ, ದೇಶ ಮುನ್ನಡೆಸಲು ಸಹಕಾರಿ ಸಂಸ್ಥೆಗಳ ಸಹಕಾರ ಅತ್ಯಮೂಲ್ಯವಾಗಿದೆ. ಕೇಂದ್ರ ಸರಕಾರದ ಆದೇಶದಂತೆ, ಈ ಬಾರಿ ಅಂತರಾಷ್ಟ್ರೀಯ ಸಹಕಾರಿ ವರ್ಷ ಆಚರಿಸಲಾಗುತ್ತಿದೆ.  ಪರಿಸರ ಉಳಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ 1000 ಸಸಿ ವಿತರಣೆ ಕಾರ್ಯಕ್ರಮ ಆಯೋಜಿಸಿದೆ. ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಲು ಸಾಧ್ಯ ಎಂಬ ಧ್ಯೇಯಯೊಂದಿಗೆ ಅಂತರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಪ್ರಥಮವಾಗಿ ನಾವು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದ್ದೇವೆ. ಇದರ ಸದುಪಯೋಗವನ್ನು ಸ್ಥಳೀಯರು ಪಡೆಯುವಂತೆ ಮನವಿ ಮಾಡಿದರು.

ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ವರಿ‌ ಕಿಣಿ, ಪ್ರಸಾದ್‌ ನೇತ್ರಾಲಯದ ‌ಡಾ. ಪ್ರತಿಭಾ, ಪಡುಬಿದ್ರಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಶಿಕಲಾ ವೈ ಮಾತನಾಡಿದರು.

ವೇದಿಕೆಯಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನಿರ್ದೇಶಕರಾದ ವಾಸುದೇವ ದೇವಾಡಿಗ, ಮಾಧವ ಆಚಾರ್ಯ, ಕೃಷ್ಣ ಬಂಗೇರಾ, ಹಸನ್ ಬಾವಾ, ಗಿರೀಶ್‌ ಪಲಿಮಾರು, ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಶೋಭಾ ಎಚ್. ಪುತ್ರನ್ ಉಪಸ್ಥಿತರಿದ್ದರು.

ಶ್ರೀಮತಿ ವೀಕ್ಷಿತಾ ಸ್ವಾಗತಿಸಿ, ನಿರೂಪಿಸಿದರು. ಮೋಹನ್ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.