ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಕಂಚಿನಡ್ಕ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಮಂಜೂರಾತಿ
(Padubidri) ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿನಡ್ಕ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಮಂಜೂರಾತಿ ಪತ್ರವನ್ನು ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿಯವರು ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾರವರಿಗೆ ಹಸ್ತಾಂತರಿಸಿದರು.
ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಉದಯ ಕುಮಾರ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಸದಸ್ಯ ಗಣೇಶ್ ಪಡುಬಿದ್ರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ವಲಯಧ್ಯಕ್ಷ ಭುಜಂಗ ಆಚಾರ್ಯ, ಮೇಲ್ವಿಚಾರಕಿ ಸರಿತಾ, ಸೇವಾ ಪ್ರತಿನಿಧಿ ಪ್ರೀತಿ, ಸುನೀತಾ, ರುದ್ರಭೂಮಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಗ್ರಾಮಸ್ಥರು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

