ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಕೆ. ಪ್ರಕಾಶ್ ಶೆಟ್ಟಿ.
(Padubidri) ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಶನಿವಾರ ಬೆಳಿಗ್ಗೆ ಬಾಲಾಲಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಮಂಭಾಗ ನೆರವೇರಿತು.
ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಎ. 15 ಕ್ಕೆ ದೇವಳದ ಜೀರ್ಣೋದ್ಧಾರ ಕಾರ್ಯಗಳು ಸಂಪೂರ್ಣಗೊಳ್ಳಲಿದೆ. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವು ಎ. 23 ತಾರೀಕಿನಿಂದ ಮೇ.4 ರ ವರೆಗೆ ವಿಜೃಂಭಣೆಯಿಂದ ಜರಗಲಿದೆ. ಸರ್ವರೂ ದೇವರ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಈ ಸಂದರ್ಭ ದೇವಸ್ಥಾನದ ತಂತ್ರಿಗಳಾದ ವೇದಮೂರ್ತಿ ಕೊಡವೂರು ಕಂಬಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯ, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಅನುವಂಶಿಕ ಮೊಕ್ತೇಸರರಾದ ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳರು ಮತ್ತು ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ, ಜೀರ್ಣೕೊದ್ಧಾರ ಸಮಿತಿಯ ಉಪಾಧ್ಯಕ್ಷ ಪಿ. ರವೀಂದ್ರನಾಥ ಜಿ. ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಮುರಳೀನಾಥ ಶೆಟ್ಟಿ ದೇಗುಲದ ಕಾರ್ಯನಿರ್ವಹಣಾಧಿಕಾರಿ ಕೆ. ರಾಜಗೋಪಾಲ ಉಪಾಧ್ಯಾಯ, ನವೀನ್ ಚಂದ್ರ ಜೆ. ಶೆಟ್ಟಿ, ಸಂತೋಷ್ ಎನ್ ಶೆಟ್ಟಿ, ವೈ ಎನ್. ರಾಮಚಂದ್ರ ರಾವ್, ನವೀನ್ ಎನ್ ಶೆಟ್ಟಿ, ವೈ. ಸುಕುಮಾರ್, ಜಯ ಶೆಟ್ಟಿ ಪದ್ರ, ಶ್ರೀನಾಥ ಹೆಗ್ಡೆ, ಅಶೋಕ್ ಸಾಲ್ಯಾನ್, ಶ್ರೀಧರ ಆಚಾರ್ಯ, ಪೇಟೆಮನೆ ಅನಿಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

