ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಚೆಂಡು ಕ್ರೀಡೆಗೆ ಚಾಲನೆ
(ಚಿತ್ರ, ವಿಡಿಯೋ ಕೃಪೆ: ರವಿ ಡಿಜಿಟಲ್ಸ್ ಪಡುಬಿದ್ರಿ)
(Padubidri) ಪಡುಬಿದ್ರಿ : ಪುರಾಣ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಚೆಂಡು ಕ್ರೀಡೆಗೆ ಚಾಲನೆ ನೀಡಲಾಯಿತು.
ದೇವಳದ ತಂತ್ರಿವರ್ಯರ ಪ್ರಾರ್ಥನೆಯೊಂದಿಗೆ ಚೆಂಡಿನ ಸೇವಾಕರ್ತರಾದ ಶರತ್ ಪೂಜಾರಿಯವರು ಬಗ್ಗೇಡಿ ಗುತ್ತಿನಾರ್ ಮತ್ತು ನಡ್ಸಾಲು ಗುತ್ತಿನಾರುಗಳಿಗೆ ಚೆಂಡು ಹಸ್ತಾಂತರಿಸಿ ಅವರು ಚೆಂಡನ್ನು ದೇವಳದ ಮುಂಭಾಗದ ವಠಾರಕ್ಕೆ ಎಸೆಯುವ ಮೂಲಕ ಚಾಲನೆ ನೀಡಿದರು.
ಪಾದೆಬೆಟ್ಟುವಿನ ಮಾಗಂದಡಿ ಯುವಕರು ಮತ್ತು ನಡ್ಸಾಲು ಗ್ರಾಮದ ಯುವಕರು ರಥೋತ್ಸವದ ಮರುದಿನ ಚೆಂಡಾಟ ಆಡುವ ಪ್ರತೀತಿ.
ಪ್ರತಿ ವರ್ಷದಂತೆ ಈ ಬಾರಿಯೂ ಊರಿನ ಹಿರಿಯರು, ಕಿರಿಯರು ಚೆಂಡು ಆಡುವ ಮೂಲಕ ಸಂಭ್ರಮಿಸಿದರು.
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರರಾಜ ಅರಸು ಕಿನ್ಯಕ್ಕ ಬಲ್ಲಾಳ್ (Padubidri beedu Rathnakara Raja Arasu Kinnakka Ballal)ಮತ್ತು ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ(Petemane Bhavanishankar Hegde), ಬಗ್ಗೆಡಿ ಗುತ್ತಿನಾರ್ ಶೇಖರ ಶೆಟ್ಟಿ, ನಡ್ಸಾಲು ಗುತ್ತಿನಾರ್ ಶ್ರೀನಾಥ ಹೆಗ್ಗಡೆ, ಅನಿಲ್ ಶೆಟ್ಟಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಉಪ ತಹಶೀಲ್ದಾರ್ ಅಶೋಕ್ ಕೋಟೆಕಾರ್ (Ashok Kotekar) ಮತ್ತು ನೂರಾರು ಭಕ್ತರು ಉಪಸ್ಥಿತರಿದ್ದರು.
