• Home  
  • ಪಡುಬಿದ್ರಿ ಸಹಕಾರಿ ಸೊಸೈಟಿ ಆಯೋಜನೆಯಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ (72nd All India Cooperative Week organized by Padubidri Cooperative Society)  
- co-oparative - ಶಾಲಾ ಕಾಲೇಜು

ಪಡುಬಿದ್ರಿ ಸಹಕಾರಿ ಸೊಸೈಟಿ ಆಯೋಜನೆಯಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ (72nd All India Cooperative Week organized by Padubidri Cooperative Society)  

Share: ಪಡುಬಿದ್ರಿ ಸಹಕಾರಿ ಸೊಸೈಟಿ ಆಯೋಜನೆಯಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ     ಪಡುಬಿದ್ರಿ ಗಣಪತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ  ವ್ಯಕ್ತಿತ್ವ ವಿಕಸನ ಶಿಬಿರ (Padubidri) ಪಡುಬಿದ್ರಿ:  72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಹಾಗೂ ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ  ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸಲಾಯಿತು.     ಪಡುಬಿದ್ರಿ ಗಣಪತಿ ಪ್ರೌಢಶಾಲಾ ಮುಖ್ಯ […]

(Padubidri) ಪಡುಬಿದ್ರಿ:  72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಹಾಗೂ ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ  ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸಲಾಯಿತು.

    ಪಡುಬಿದ್ರಿ ಗಣಪತಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ  ರಾಘವೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

   ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯಮಟ್ಟದ ತರಬೇತುದಾರರಾದ ಶ್ರೀಧರ್ ಪಿ. ಎಸ್. ಬ್ರಹ್ಮಾವರ ಇವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

   ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ವ್ಯಕ್ತಿತ್ವ ವಿಕಸನ ತರಬೇತಿಯ ಪ್ರಯೋಜನಗಳನ್ನು ತಿಳಿಸಿದರು.

  ಕಾರ್ಯಕ್ರಮದಲ್ಲಿ ಎಸ್.ಬಿ.ವಿ.ಪಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅಶೋಕ್,  ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ನಿರ್ದೇಶಕರಾದ ರಾಜಾರಾಮ್ ರಾವ್, ಶಿವರಾಮ ಎನ್ ಶೆಟ್ಟಿ, ಮಾಧವ ಆಚಾರ್ಯ, ಹಸನ್ ಬಾವ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ನಿಶ್ಮಿತಾ ಪಿ.ಎಚ್. ಗಣಪತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘ ಇದರ ಕೋಶಾಧಿಕಾರಿ ಶ್ರೀಮತಿ ಕಸ್ತೂರಿ,  ಶಾಲಾ ಸಿಬ್ಬಂದಿ ವೃಂದ, ಹಾಗೂ ಉಭಯ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.