ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ವೈ. ಸುಧೀರ್ ಕುಮಾರ್ ನೇತೃತ್ವದ ಬಣ ಜಯಭೇರಿ
(Padubiri) ಪಡುಬಿದ್ರಿ : ಎರಡು ದಶಕಗಳ ಕಾಲ ಅವಿರೋಧ ಆಯ್ಕೆಯ ಮೂಲಕ ನಡೆಯುತ್ತಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಆಡಳಿತ ಮಂಡಳಿಗೆ ಮಂಗಳವಾರ ಪಡುಬಿದ್ರಿ ಬಂಟರ ಭವನದಲ್ಲಿ ಚುನಾವಣೆ ನಡೆದು ವೈ. ಸುಧೀರ್ ಕುಮಾರ್ ನೇತೃತ್ವದ ತಂಡ ಜಯ ಗಳಿಸಿದೆ.
ಒಟ್ಟು 13 ಆಡಳಿತ ಮಂಡಳಿಯ ಸದಸ್ಯರಲ್ಲಿ ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳಿದ್ದು, ಇಬ್ಬರು ಮೊದಲೇ ಅವಿರೋಧವಾಗಿ ಆಯ್ಕೆಗೊಂಡಿದ್ದರು.
ಸಹಕಾರಿ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ ಎಂ ಚುನಾವಧಿಕಾರಿಯಾಗಿದ್ದು, ಆಯ್ಕೆಗೊಂಡ ಸದಸ್ಯರ ಹೆಸರನ್ನು ಅವರು ಘೋಷಿಸಿದರು.
ಒಟ್ಟು 3,200 ಮತಗಳಲ್ಲಿ 1,935 ಮತ ಚಲಾವಣೆಯಾಗಿದೆ. ಚುನಾವಣೆಯಲ್ಲಿ ಶೇ.60. ಮತದಾನವಾಗಿದೆ.
ಮುಂದಿನ 5 ವರ್ಷಗಳ ಅವಧಿಗೆ ವೈ ಸುಧೀರ್ ಕುಮಾರ್, ಗುರುರಾಜ ಪೂಜಾರಿ, ಜಿತೇಂದ್ರ ಫುರ್ಟಾಡೊ, ಮಾಧವ ಆಚಾರ್ಯ, ವಾಸುದೇವ, ರಾಜಾರಾಮ ರಾವ್, ಹಸನ್ ಬಾವ, ರೋಹಿಣಿ ಎ., ಕುಸುಮಾ ಕರ್ಕೇರ, ಗಿರೀಶ್ ಫಲಿಮಾರು, ಶಿವರಾಮ ಎನ್ ಶೆಟ್ಟಿ, ಕೃಷ್ಣ ಬಂಗೇರ, ಕಾಂಚನಾ ಆಯ್ಕೆಯಾಗಿದ್ದಾರೆ.

