• Home  
  • ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Sri Narayana Guru High School, Padubelle)
- social service

ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Sri Narayana Guru High School, Padubelle)

Share: ಪಡುಬೆಳ್ಳೆ ಶ್ರೀ ನಾರಾಯಣ ಗುರು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಪಡುಬೆಳ್ಳೆ ಗೆಳೆಯರ ಬಳಗದ ಆಯೋಜನೆ (Padubelle) ಪಡುಬೆಳ್ಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಮತ್ತು  ಪಡುಬೆಳ್ಳೆ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ್ರೌಢಶಾಲೆ ಪಡುಬೆಳ್ಳೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಸುವರ್ಣರವರು ವಹಿಸಿದ್ದರು.    ಸಂಪನ್ಮೂಲ ವ್ಯಕ್ತಿಯಾಗಿ ಕರಾವಳಿ […]

(Padubelle) ಪಡುಬೆಳ್ಳೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಮತ್ತು  ಪಡುಬೆಳ್ಳೆ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ್ರೌಢಶಾಲೆ ಪಡುಬೆಳ್ಳೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.

   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಸುವರ್ಣರವರು ವಹಿಸಿದ್ದರು.

   ಸಂಪನ್ಮೂಲ ವ್ಯಕ್ತಿಯಾಗಿ ಕರಾವಳಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ಭಾಗವಹಿಸಿದ್ದರು.

   ಅವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ, ಮದ್ಯಪಾನ, ಧೂಮಪಾನ, ಡ್ರಗ್ಸ್ ಮತ್ತು ಮೊಬೈಲ್ ಬಳಕೆಯಿಂದ ಆರೋಗ್ಯದಲ್ಲಾಗುವ ದುಷ್ಪರಿಣಾಮ ಬಗ್ಗೆ ಮಾಹಿತಿ ನೀಡಿದರು.

     ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ರಾಜ್ಯಧ್ಯಕ್ಷರಾದ ದೇವದಾಸ ಹೆಬ್ಬಾರ್ ರವರು ದುಶ್ಚಟ ದಿಂದ ಮಕ್ಕಳ ಮೇಲೆ ಆಗುವ ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

   ಪಡುಬೆಳ್ಳೆ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ಶೆಟ್ಟಿ ಕಕ್ರಮನೆ, ರಾಘವೇಂದ್ರ ಶೆಟ್ಟಿ, ದಿನಕರ ಭಂಡಾರಿ, ಶ್ರೀಮತಿ ಗೀತಾವಾಗ್ಲೆ , ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷರು, ಶಾಲಾ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯ ಕ್ರಮದಲ್ಲಿ ವಲಯ ಮೇಲ್ವಿಚಾರಕಿ ಗೀತಾ ಎನ್‌,  ಸೇವಾ ಪ್ರತಿನಿಧಿ ಶ್ರೀಮತಿ ಮಲ್ಲಿಕಾ ಹಾಗೂ ದಿವ್ಯ ಇದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.