ಪಣಂಬೂರು ಬಳಿ ಸರಣಿ ಅಪಘಾತ: 3 ಸಾವು
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು
(Mangaluru) ಮಂಗಳೂರು : ಪಣಂಬೂರು ಸಿಗ್ನಲ್ ನಲ್ಲಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಘಟಣೆ ಶನಿವಾರ ಘಟಿಸಿದೆ.
ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.
ಮುಂಭಾಗದಲ್ಲಿ ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ, ಕಾರು, ಆಟೊ ರಿಕ್ಷಾ ನಿಂತಿತ್ತು.
ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೊಂದು ಅಪಘಾತ: ಮೂರು ಸಾವು
ಬಿ.ಸಿ.ರೋಡ್ ಬಳಿಯು ಇನೋವಾ ಕಾರು ಸರ್ಕಲ್ ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆಯೂ ಇಂದು ಘಟಿಸಿದೆ.

