ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ
(Belapu)ಬೆಳಪು: ಪಣಿಯೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ನೀಡಲಾದ ಕೊಡೆ, ನೋಟ್ ಪುಸ್ತಕ, ಬ್ಯಾಗು ಹಾಗೂ ಮಹೇಶ್ ಬೆಳಪು ಇವರು ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನೀಡಿರುತ್ತಾರೆ. ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ವಿತರಿಸಿದರು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭೋಜ ದೇವಾಡಿಗ, ಉಪಾಧ್ಯಕ್ಷೆ ಶ್ರೀಮತಿ ಸುಜಯ, ಮಹೇಶ್ ಬೆಳಪು, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಾವಿತ್ರಿ ಹಾಗೂ ಶಾಲಾ ಶಿಕ್ಷಕಿ ವೃಂದ ಮತ್ತು ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

