# Tags
#ಅಪರಾಧ

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ (Sculptor Krisha Naik, who made Parashramaʼs Idol, arrest in Kerala)

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ  

(Karkala) ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿರುವ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರೆಸಿಕೊಂಡಿದ್ದ ಕೃಷ್ಣ ನಾಯ್ಕನನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಲು ಯಶಸ್ವಿಯಾಗಿದ್ದಾರೆ.

 ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್ʼ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದ. ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿಯವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2