ಪರಿಷ್ಕೃತ ಆದೇಶ: ನಾಳೆ (ಜು25) ಉಡುಪಿ ಜಿಲ್ಲೆಯ ಪದವಿ, ಡಿಪ್ಲೋಮಾ ಕಾಲೇಜುಗಳಿಗೂ ರಜೆ ಘೋಷಣೆ
ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 24 ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಉಲ್ಲೇಖ(2) ರಂತೆ ಘೋಷಿಸಲಾಗಿರುತ್ತದೆ.
ಮುಂದುವರಿದು ಉಲ್ಲೇಖ(3)ರಂತೆ ಮಂಗಳೂರು ವಿಶ್ವ ವಿದ್ಯಾನಿಲಯದ ದಿನಾಂಕ 25.07,2023 ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಸಹ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ತಮ್ಮ ಪರಿಷ್ಕೃತ ಆದೇಶದಲ್ಲಿ ತಿಳಿಸಿದ್ದಾರೆ.
ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಮ್ಮವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.

