# Tags
#ಕರಾವಳಿ #ಜೀವನಶೈಲಿ

ಪರಿಸರ ಉಳಿದರೆ ಮಾತ್ರ ಮನುಕುಲದ ಶ್ರೀರಕ್ಷೆ ಸಾಧ್ಯ- ಅಜಿತ್ ದೇವಾಡಿಗ

ಕೋಟ: ಪ್ರಕೃತಿ ಉಳಿದರೆ ಮಾತ್ರ ಮನುಕುಲ ಉಳಿಯಬಹುದು, ಆದರೆ ಅದೇ ಪ್ರಕೃತಿಯ ಮೇಲೆ ನಿರಂತರ ಅತ್ಯಾಚಾರ ಎಸೆದರೆ ಮನುಕುಲದ ಶ್ರೀರಕ್ಷೆ ಹೇಗೆ ಸಾಧ್ಯ ಎಂದು ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಪ್ರಶ್ನಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ 166ನೇ ವಾರದ ಪರಿಸರಸ್ನೇಹಿ ಅಭಿಯಾನದ ಹಿನ್ನಲ್ಲೆಯಲ್ಲಿ ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್, ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ , ಸಮುದ್ಯತಾ ಗ್ರೂಪ್ಸ್ ಕೋಟ, ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿ, ಎಜ್ಯೂಕೇರ್ ಕೋಟ, ಯಕ್ಷ ಸೌರಭ ಕಲಾರಂಗ ಕೋಟ ಇವರುಗಳ ಸಹಯೋಗದೊಂದಿಗೆ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯೋಜನೆಯೊಂದಿಗೆ ನಡೆದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಕೃತಿಯನ್ನು ಎಷ್ಟು ಪ್ರೀತಿಸುತ್ತೇವೋ, ಅಷ್ಟು ಅವುಗಳು ನಮ್ಮನ್ನು ಕಾಯುತ್ತವೆ. ಆದರೆ ಅವುಗಳ ಅವನತಿಗೊಳಿಸುವುದರಿಂದ ಕಾಲಕಾಲಕ್ಕೆ ಮಳೆ, ಬೆಳೆಯಾಗದೆ ಸಮಸ್ಯೆ ಎದುರಿಸುತ್ತಿದ್ದೇವೆ.

 ನೀರಿಗೆ ಹಾಹಾಕಾರ ಪಡುತ್ತಿದ್ದೇವೆ. ಬಿಸಿಲ ತಾಪ ನಮ್ಮನ್ನು ಸುಡುತ್ತಿದೆ. ಹೀಗಾದರೆ ನಮ್ಮ ಅವನತಿ ಶತ ಸಿದ್ಧ. ಅದಕ್ಕಾಗಿ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇಕಿದೆ.

ಅದರಲ್ಲೂ ಪಂಚವರ್ಣ ಅಥವಾ ಇನ್ನುಳಿದ ಸಂಘಸಂಸ್ಥೆಗಳ ಪರಿಸರ ಕಾಳಜಿ ನಿಜಕ್ಕೂ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಹಂದಟ್ಟು ಪರಿಸರದ ಸಾರ್ವಜನಿಕರಿಗೆ ಗಿಡ ವಿತರಿಸಿ ನೆಟ್ಟು ಅದರ ಸೆಲ್ಫಿ ತೆಗೆದು ಕಳುಹಿಸಿ ಬಹುಮಾನ ಗೆಲ್ಲಿ ಎಂಬ ಕಾರ್ಯಕ್ರಮಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟದ ಜನತಾ ಸಂಸ್ಥೆಯ ಮ್ಯಾನೇಜರ್ ಶ್ರೀನಿವಾಸ ಕುಂದರ್, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಜಾನಕಿ ಹಂದೆ, ಜೀವನ್ ಮಿತ್ರ ಸೇವಾ ಟ್ರಸ್ಟ್ ಮುಖ್ಯಸ್ಥ ನಾಗರಾಜ್ ಪುತ್ರನ್, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಹಂದಟ್ಟು, ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಜಯಂಟ್ಸ್ ಗ್ರೂಪ್ಸ್ ನ ಶ್ರೀನಾಥ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣ ಮಹಿಳಾ ಮಂಡಲದ ಶಕೀಲ ಪೂಜಾರಿ, ವಸಂತಿ ಹಂದಟ್ಟು, ಹಂದಟ್ಟು ಮಹಿಳಾ ಮಂಡಲದ ಯಶೋಧ ಮತ್ತಿತರರು ಉಪಸ್ಥಿತರಿದ್ದರು.

ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಬಾಯರಿ ಕಾರ್ಯಕ್ರಮ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ನಿರ್ವಹಿಸಿದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2