ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವೆ ಹೆಬ್ಬಾಳ್ಕರ್
ಬೆಳಗಾವಿ : ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Minister Laxmi Hebbalkar)ಅವರು ತಮ್ಮ ಗೃಹ ಕಚೇರಿಯಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಸಂಜಯ ಡುಮ್ಮಗೋಳ, ಹಿಂಡಲಗಾ ವೈದ್ಯಕೀಯ ಅಧಿಕಾರಿ ಡಾ. ವೈಶಾಲಿ ಕುಲಕರ್ಣಿ, ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

