ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರಿಗೆ ಸನ್ಮಾನ
ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನ ಸಾಧಕ, ಕುಮಾರ್ ಪೆರ್ನಾಜೆ
(Putturu) ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ನಡೆದಿದ್ದು, ರಾಷ್ಟ್ರೀಯ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನ ಸಾಧಕ, ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷ ಶಾಸಕರಾದ ಅಶೋಕ್ ಕುಮಾರ್ ರೈ ಶಾಲು ಪೇಟ ಹೊದಿಸಿ ಸನ್ಮಾನ ಪತ್ರಗಳನ್ನಿತ್ತು ಸನ್ಮಾನಿಸಿದರು.
ಕಂಬಳ ಸಮಿತಿಯ ಗೌರವಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಹಣ್ಣು ಹಂಪಲುಗಳನ್ನಿತ್ತು ಗೌರವಿಸಿದರು.
ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿವಿ ಸನ್ಮಾನ ಪತ್ರವಾಚಿಸಿದರು.
ಕಂಬಳ ಸಮಿತಿಯ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಟಿ .ಶೆಟ್ಟಿ, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಕೋಶಾಧಿಕಾರಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಂಬಳದ ತೀರ್ಪುಗಾರ ಗುಣಪಾಲ ಕಡಂಬ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದ. ಕ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮದ್ ಬಡಗನ್ನೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮೌರಿಸ್ ಮಸ್ಕರೆನಸ್, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮದ್, ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಸರಿತ, ನ್ಯಾಯಾಧೀಶೆ ಪ್ರಕೃತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳ, ಚಲನಚಿತ್ರ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮುಂತಾದ ಗಣ್ಯ ಅತಿಥಿಗಳು ಖ್ಯಾತ ಚಲನಚಿತ್ರ ನಟ ನಟಿಯರು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸಂಚಾಲಕ ವಸಂತಕುಮಾರ್ ರೈ ದುಗ್ಗಳ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ನಿರೂಪಿಸಿದರು.

