• Home  
  • ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ, ಕೇಂದ್ರ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಲಿ- ಉಡುಪಿ ಮಹಿಳಾ ಕಾಂಗ್ರೆಸ್ ಆಗ್ರಹ (Udupi Mahila Congress demands that the State and Central GOVT against Prajwal Revanna)
- ಅಪರಾಧ - ರಾಜಕೀಯ

ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ, ಕೇಂದ್ರ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಲಿ- ಉಡುಪಿ ಮಹಿಳಾ ಕಾಂಗ್ರೆಸ್ ಆಗ್ರಹ (Udupi Mahila Congress demands that the State and Central GOVT against Prajwal Revanna)

Share: ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ, ಕೇಂದ್ರ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಲಿ– ಉಡುಪಿ ಮಹಿಳಾ ಕಾಂಗ್ರೆಸ್ ಆಗ್ರಹ (Udupi) ಉಡುಪಿ: ಪ್ರಜ್ವಲ್ ರೇವಣ್ಣ ಅವರ ರಾಸಲೀಲೆಗಳ ಪೆನ್ ಡ್ರೈವ್ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಶಿಕ್ಷೆಗೆ ಒಳಪಡಿಸಬೇಕು. ಮಾತ್ರವಲ್ಲ, ತನ್ನ ಗುಟ್ಟು ಬಯಲಾದ ತಕ್ಷಣ ಜರ್ಮನಿಗೆ ಪಲಾಯನಗೈದಿರುವ ಆತನನ್ನು ತಕ್ಷಣ ಭಾರತಕ್ಕೆ ಬರುವಂತೆ ಆದೇಶ ನೀಡಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ. ಉಡುಪಿ ಪ್ರತ್ರಿಕಾ ಭವನದಲ್ಲಿ […]

ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ, ಕೇಂದ್ರ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಲಿಉಡುಪಿ ಮಹಿಳಾ ಕಾಂಗ್ರೆಸ್ ಆಗ್ರಹ

(Udupi) ಉಡುಪಿ: ಪ್ರಜ್ವಲ್ ರೇವಣ್ಣ ಅವರ ರಾಸಲೀಲೆಗಳ ಪೆನ್ ಡ್ರೈವ್ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಶಿಕ್ಷೆಗೆ ಒಳಪಡಿಸಬೇಕು. ಮಾತ್ರವಲ್ಲ, ತನ್ನ ಗುಟ್ಟು ಬಯಲಾದ ತಕ್ಷಣ ಜರ್ಮನಿಗೆ ಪಲಾಯನಗೈದಿರುವ ಆತನನ್ನು ತಕ್ಷಣ ಭಾರತಕ್ಕೆ ಬರುವಂತೆ ಆದೇಶ ನೀಡಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.

ಉಡುಪಿ ಪ್ರತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್‌ ಪ್ರತಿನಿಧಿಗಳು ತೀವ್ರ ಆಕ್ರೋಶಿತವಾಗಿ ನುಡಿದರು.

ಪ್ರಜ್ವಲ್ ರೇವಣ್ಣ ಅವರ ರಾಸಲೀಲೆಗಳ ಪೆನ್ ಡ್ರೈವ್ ಘಟನೆಯ ಸುದ್ದಿ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಈ ಘಟನೆಯನ್ನು ಬಲವಾಗಿ ಖಂಡಿಸುತ್ತಿದೆ. ಪ್ರಧಾನ ಮಂತ್ರಿಗಳು ಹಾಗೂ ಬಿಜೆಪಿಯ ನಾಯಕರು ಇಷ್ಟು ದೊಡ್ಡ ಹಗರಣ ನಡೆದ ಮೇಲೂ ಬಿಜೆಪಿ ಪಕ್ಷವು ಜೆಡಿಎಸ್ ಪಕ್ಷವನ್ನು ಇನ್ನೂ ಮೈತ್ರಿಯೊಂದಿಗೆ ಆಲಂಗಿಸಿಕೊಂಡು ಮುಂದುವರಿಯಲಿದೆಯೇ? ದೇಶವನ್ನೇ ತಲ್ಲಣಗೊಳಿಸಿದ ಈ ಹಗರಣವು ತಮ್ಮ ಪಕ್ಷದ ಮೇಲೆ ಏನೂ ಪರಿಣಾಮ ಬೀರಲಿಲ್ಲವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

 ರಾಜ್ಯದ  ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಶಿಕ್ಷೆಗೆ ಒಳಪಡಿಸಬೇಕು, ಮಾತ್ರವಲ್ಲ, ತನ್ನ ಗುಟ್ಟು ಬಯಲಾದ ತಕ್ಷಣ ಜರ್ಮನಿಗೆ ಪಲಾಯನಗೈದಿರುವ ಆತನನ್ನು ತಕ್ಷಣ ಭಾರತಕ್ಕೆ ಕರೆತರಬೇಕು. ಯಾವುದೇ ಕಾರಣಕ್ಕೂ ಅಪರಾಧಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುವಂತಾಗಬಾರದು. ಆತನಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸೂಕ್ತವಾದ ನ್ಯಾಯ, ಸಿಗುವಂತಾಗಬೇಕು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಾ ಈ ಸಹೋದರಿಯರಿಗೆ ಒತ್ತಾಸೆಯಾಗಿ ನಿಲ್ಲಲಿದೆ ಎಂದು ಮಹಿಳಾ ಕಾಂಗ್ರೆಸ್ ಹೇಳಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.