• Home  
  • ಪ್ರೊ. ಬಿ.ಎ ವಿವೇಕ ರೈ ಯವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ (Prof. B.A. Vivek Rai to receive Dr. Shivaram Karanth Award)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಪ್ರೊ. ಬಿ.ಎ ವಿವೇಕ ರೈ ಯವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ (Prof. B.A. Vivek Rai to receive Dr. Shivaram Karanth Award)

Share: ಪ್ರೊ. ಬಿ.ಎ ವಿವೇಕ ರೈ ಯವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ  ಅ. 11 : ಎಂಜಿಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಪ್ರಶಸ್ತಿ ಪ್ರದಾನ (Udupi) ಉಡುಪಿ: ಹಿರಿಯ ಸಾಹಿತಿ, ಲೇಖಕ, ವಿಶ್ರಾಂತ ಕುಲಪತಿಗಳಾದ ಪ್ರೊ ಬಿ. ಎ ವಿವೇಕ ರೈ ಯವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟಿನ ಮೊದಲ ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.    ಕನ್ನಡ ಸಾಹಿತ್ಯ, ವಿಮರ್ಶೆ, ಜಾನಪದ ಸಂಶೋಧನೆ,  ಡಾ. […]

(Udupi) ಉಡುಪಿ: ಹಿರಿಯ ಸಾಹಿತಿ, ಲೇಖಕ, ವಿಶ್ರಾಂತ ಕುಲಪತಿಗಳಾದ ಪ್ರೊ ಬಿ. ಎ ವಿವೇಕ ರೈ ಯವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟಿನ ಮೊದಲ ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

   ಕನ್ನಡ ಸಾಹಿತ್ಯ, ವಿಮರ್ಶೆ, ಜಾನಪದ ಸಂಶೋಧನೆ,  ಡಾ. ಶಿವರಾಮ ಕಾರಂತರ ಬದುಕಿನ ದಾಖಲಾತಿ ಇತ್ಯಾದಿ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು  ನೀಡಲಾಗಿದೆ.

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರಂತ ಪೀಠವನ್ನು ಸ್ಥಾಪಿಸಿ, ಅದರ ಮೂಲಕ ಕಾರಂತರ ಬದುಕು – ಬರಹಗಳ ಹಲವು ಆಯಾಮಗಳನ್ನು ದಾಖಲಿಸುವ ಪ್ರೊ.ಬಿ.ಎ ವಿವೇಕ ರೈಯವರ ಕಾರ್ಯವನ್ನುಆಯ್ಕೆ ಸಮಿತಿಯು ಪ್ರಶಂಸಿಸಿದೆ.

   ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ  ಅಧ್ಯಕ್ಷರಾದಡಾ. ನಾಗಪ್ಪಗೌಡ, ಹಿರಿಯ ಸಂಶೋಧಕಿ ಡಾ. ರೇಖಾ ಬನ್ನಾಡಿ, ರಂಗತಜ್ಞ ವೆಂಕಟರಮಣ ಐತಾಳ, ಟ್ರಸ್ಟಿನ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳನ್ನೊಳಗೊಂಡ ತಜ್ಞರಆಯ್ಕೆ ಸಮಿತಿಯು ಪ್ರಶಸ್ತಿಯ ಆಯ್ಕೆ ನಡೆಸಿದೆ.

   ಅಕ್ಟೋಬರ್ ೧೧ ರಂದು ಸಂಜೆ ೪ ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ಕಾರಂತರ ಜನ್ಮದಿನೋತ್ಸವ-ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು ಇಪ್ಪತೈದು ಸಾವಿರರೂಪಾಯಿ ಮೊತ್ತ,  ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.