# Tags
#Mansoon #PROBLEMS

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ಉಡುಪಿ – ದಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Fengal strom effect: Orange elert in Udupi, DK Dist. Holyday announced for Schools and Colleges)

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ಉಡುಪಿ – ದಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(Udupi DK) ಉಡುಪಿ\ದ.ಕ : ಫೆಂಗಲ್‌ ಚಂಡಮಾರುತ ಕೆಲವು ಕಡೆಗಳಲ್ಲಿ ಅನಾಹುತ ಸೃಷ್ಠಿಸಿದ ಹಿನ್ನೆಲೆಯಲ್ಲಿ   ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್  ಘೋಷಿಸಿದ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈಮುಗಿಲನ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಐಎಂಡಿ ಅಧಿಕಾರಿಗಳ ಪ್ರಕಾರ, ಬೆಂಗಳೂರು ಸೇರಿದಂತೆ ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು  ಹೇಳಿದೆ.

 ಸಮುದ್ರಕ್ಕೆ ತೆರಳದಂತೆ ಮೀನುಗಾರರರಿಗೆ ಸೂಚನೆ:

ಡಿ.2 ಮತ್ತು 3ರಂದು, ದಕ್ಷಿಣ ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 35 ಕಿಲೋಮೀಟರ್‌ನಿಂದ 45 ಕಿಮೀ ಅಥವಾ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು  ಮುನ್ಸೂಚನೆ ನೀಡಿದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2