• Home  
  • ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (Congress State convention in Mangaluru on 17th Feb: Ex Minister Sorake)
- ರಾಜಕೀಯ - ವಿಡಿಯೋ

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ (Congress State convention in Mangaluru on 17th Feb: Ex Minister Sorake)

Share: ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ಕಾಪು, ಫೆ. 15 : ಫೆ. 17ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ (EX Minister Vinaya Kumar Sorake) ಹೇಳಿದ್ದಾರೆ. ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ […]

ಫೆ.೧೭ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ   ಸಮಾವೇಶ:  ಕಾಪುವಿನಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ

ಕಾಪು, ಫೆ. 15 : ಫೆ. 17ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ನಡೆಯಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ (EX Minister Vinaya Kumar Sorake) ಹೇಳಿದ್ದಾರೆ.

ಅವರು ಗುರುವಾರ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತೀ ಬೂತ್‌ಗಳಿಂದ 20 ಮಂದಿಯಂತೆ 1 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಉಡುಪಿ ಜಿಲ್ಲೆಯಿಂದ ಹದಿನೈದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಶನಿವಾರ ಬೆಳಿಗ್ಗೆ ಬೆಳಿಗ್ಗೆ 10 ಗಂಟೆಗೆ ಕಾಪುವಿನಿಂದ ಹೊರಟು, 11 ಗಂಟೆಗೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಹೆಜಮಾಡಿ ಟೋಲ್‌ನಲ್ಲಿ ಜತೆ ಸೇರಲಿದ್ದಾರೆ. ಅಲ್ಲಿಂದ 300ಕ್ಕೂ ಅಧಿಕ ಬಸ್‌ಗಳ ಮೂಲಕವಾಗಿ ಕಾರ್ಯಕರ್ತರು ಸಮಾವೇಶದ ಮೈದಾನದವರೆಗೆ ತೆರಳಲಿದ್ದಾರೆ.

 ಐದು ಟ್ಯಾಬ್ಲೋಗಳು

 ಸರಕಾರದ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಸಾರುವ ಐದು ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ ಎಂದರು.
ಈ ಸಮಾವೇಶವು ಕರಾವಳಿಯಲ್ಲಿ ಕಾಂಗ್ರೆಸ್‌ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಕಾರ್ಯಕರ್ತರನ್ನು ಪುನರ್ ಸಂಘಟಿಸುವುದು. ಜನತೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಯಪಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಈ ಸಮಾವೇಶವು ಮುಂಬರುವ ಲೋಕಸಭೆ, ಜಿ.ಪಂ., ತಾ.ಪಂ. ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಸಮಾವೇಶದಲ್ಲಿ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ(Mallikarjuna Kharge), ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ (Venugopal), ಉಸ್ತುವಾರಿ ರಣಜೀತ್ ಸಿಂಗ್ ಸುರ್ಜೇವಾಲ (Ranajith Singh Surjewala), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya), ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DCM DK Shivkumar),  ಸಚಿವರು, ರಾಜ್ಯದ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಹಿತ ಪಕ್ಷದ ರಾಷ್ಟ್ರ, ರಾಜ್ಯ ಮಟ್ಟದ ನಾಯಕರು, ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
  ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉತ್ತರ ಬ್ಲಾಕ್ ಅಧ್ಯಕ್ಷ ಸಂತೋಷ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಬಂಗೇರ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪುರ್ಟಾಡೋ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.