• Home  
  • ಫೆ. 20ರಂದು ಕಾಪು ಮಂಥನ ರಿಸಾರ್ಟ್ಸ್ ಬಳಿ ಶ್ರೀ ರವಿಶಂಕರ್ ಗುರೂಜಿಯವರ ಮಹಾ ಸತ್ಸಂಗ‌ (Feb 20: Maha Satsanga of Sri Ravi Shankar Guruji near Kaup Manthan Resorts)
- Uncategorised - ವಿಡಿಯೋ

ಫೆ. 20ರಂದು ಕಾಪು ಮಂಥನ ರಿಸಾರ್ಟ್ಸ್ ಬಳಿ ಶ್ರೀ ರವಿಶಂಕರ್ ಗುರೂಜಿಯವರ ಮಹಾ ಸತ್ಸಂಗ‌ (Feb 20: Maha Satsanga of Sri Ravi Shankar Guruji near Kaup Manthan Resorts)

Share: ಫೆ. 20ರಂದು ಕಾಪು ಮಂಥನ ರಿಸಾರ್ಟ್ಸ್ ಬಳಿ ಶ್ರೀ ರವಿಶಂಕರ್ ಗುರೂಜಿಯವರ ಮಹಾ ಸತ್ಸಂಗ  (Kaup) ಕಾಪು: ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಜೀವನ ಕಲೆ ಹಾಗೂ ಸುದರ್ಶನ ಕ್ರಿಯಾಯೋಗದ ಸ್ಥಾಪಕಾಚಾರ್ಯ, ಅಂತರಾಷ್ಟ್ರೀಯ ಖ್ಯಾತಿಯ ಪದ್ಮವಿಭೂಷಣ ಶ್ರೀ ರವಿಶಂಕರ್ ಗುರೂಜಿಯವರು (Ravi Shankar Guruji)ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಫೆಬ್ರವರಿ 20, ಮಂಗಳವಾರದಂದು ಸಂಜೆ 5 ಗಂಟೆಗೆ ಕಾಪು ಸಮುದ್ರ ಕಿನಾರೆಯಲ್ಲಿರುವ ಮಂಥನ ರೆಸಾರ್ಟ್ (Manthana Resorts Kaup) ಬಳಿ ನಡೆಯಲಿರುವ ಆನಂದ ಲಹರಿ ಮಹಾ […]

ಫೆ. 20ರಂದು ಕಾಪು ಮಂಥನ ರಿಸಾರ್ಟ್ಸ್ ಬಳಿ ಶ್ರೀ ರವಿಶಂಕರ್ ಗುರೂಜಿಯವರ ಮಹಾ ಸತ್ಸಂಗ

 (Kaup) ಕಾಪು: ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಜೀವನ ಕಲೆ ಹಾಗೂ ಸುದರ್ಶನ ಕ್ರಿಯಾಯೋಗದ ಸ್ಥಾಪಕಾಚಾರ್ಯ, ಅಂತರಾಷ್ಟ್ರೀಯ ಖ್ಯಾತಿಯ ಪದ್ಮವಿಭೂಷಣ ಶ್ರೀ ರವಿಶಂಕರ್ ಗುರೂಜಿಯವರು (Ravi Shankar Guruji)ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಫೆಬ್ರವರಿ 20, ಮಂಗಳವಾರದಂದು ಸಂಜೆ 5 ಗಂಟೆಗೆ ಕಾಪು ಸಮುದ್ರ ಕಿನಾರೆಯಲ್ಲಿರುವ ಮಂಥನ ರೆಸಾರ್ಟ್ (Manthana Resorts Kaup) ಬಳಿ ನಡೆಯಲಿರುವ ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು (Kaup MLA Gurme Suresh Shetty) ಹೇಳಿದರು.

 ಅವರು ಶನಿವಾರ ಮಂಥನ ರೆಸಾರ್ಟ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಾನಸಿಕ ಒತ್ತಡ, ಕೌಟುಂಬಿಕ  ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಾನವತಾವಾದಿ ಹಾಗೂ ಶಾಂತಿದೂತ ಶ್ರೀ ರವಿಶಂಕರ್ ಗುರೂಜಿ ಅವರ ಮಹಾ ಸತ್ಸಂಗವನ್ನು ಆಯೋಜಿಸಿರುತ್ತೇವೆ.

ಜೀವನಕಲಾ ಸಂಸ್ಥೆಯ ಕಾರ್ಯಕ್ರಮಗಳು ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದು ಇಡೀ ಜಗತ್ತಿನಲ್ಲಿ ಲಾಭ ರಹಿತವಾದ ಶೈಕ್ಷಣಿಕ, ಮಾನವೀಯ ಮೌಲ್ಯಗಳುಳ್ಳ ಪ್ರಮುಖ ಸಂಸ್ಥೆಯಾಗಿದೆ.

ಉಡುಪಿ ಜಿಲ್ಲೆಗೆ ಬಂದು ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಿ ಜ್ಞಾನ, ಧ್ಯಾನ ಹಾಗೂ ಗಾನದ ಸವಿಯನ್ನು ನೀಡಲಿದ್ದಾರೆ. ಸುಮಾರು ಹದಿನೈದು ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದು ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದ್ದಾರೆ.  

 ಪತ್ರಿಕಾಗೋಷ್ಠಿಯಲ್ಲಿ ಆಟ್೯ ಆಫ್ ಲಿವಿಂಗ್‌ನ ಶಿಕ್ಷಕರಾದ ರಾಧಾ ಶೆಣೈ, ದಿನೇಶ್ ಕಾಮತ್, ವಸಂತ್ ಕುಮಾರ್, ಪ್ರಶಾಂತ್ ಪೈ, ವಿಮಲಾಕ್ಷಿ ದಿವಾಕರ್, ಶೈಲಜ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.