ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ
ಬಂಟಕಲ್; ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು 2023-2024 ನೇ ಸಾಲಿನಿಂದ ಎಂಬಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಪ್ರಾರಂಭಿಸಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ಆವರಣದಲ್ಲಿ ಜರುಗಿತು.
ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು(Paramapoojya Shri Vishwavallabha Theertha Swamiji, President of Shri Sode Vadiraja Matha Education Trust) ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಸ್ವಾಮೀಜಿ ಮಾತನಾಡಿ, ಸೋದೆ ಮಠದ ಶ್ರೀ ವಾದಿರಾಜ ಸ್ವಾಮೀಜಿಯವರು ಉಡುಪಿಯಲ್ಲಿ ಅಷ್ಟಮಠ ವ್ಯವಸ್ಥೆಯನ್ನು 16ನೇ ಶತಮಾನದಲ್ಲಿಯೇ ರೂಪಿಸಿ, ಈಗಿನ ನಿರ್ವಹಣಾಶಾಸ್ಟ್ರದ ಪರಿಣಿತರಿಗೆ ಮಾದರಿಯಾಗಿದ್ದಾರೆ. ತತ್ವಶಾಸ್ತ್ರ ಶಿಕ್ಷಣದಲ್ಲಿ ಅಳವಡಿಸಿದಾಗ ಮಾತ್ರ ಉತ್ತಮ ಆವಿಷ್ಕಾರಗಳು ಹೊರಬರಲು ಸಹಕಾರಿಯಾಗುತ್ತದೆ. ಇಂದಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀಗಳು ಎಂಬಿಎ ಕೋರ್ಸಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ನಿಟ್ಟೆಯ ಜಸ್ಟಿಸ್ ಕೆ ಎಸ್ ಹೆಗ್ಡೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ನಿರ್ದೇಶಕರಾದ ಡಾ. ಗುರುರಾಜ್ ಹೆಚ್ ಕಿದಿಯೂರು (Dr. Gururaj H Kidiyoor, Director of Justice K S Hegde Institute of Management) ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಭಾರತವನ್ನು ವಿಶ್ವದ ಅತೀ ದೊಡ್ಡ ಆರ್ಥಿಕತೆಯನ್ನಾಗಿ ಪರಿವರ್ತಿಸುವಲ್ಲಿ ಎಂಬಿಎ ಪದವೀಧರರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಸಂವಹನ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವುದರ ಜೊತೆಗೆ ದಿನ ಪತ್ರಿಕೆಗಳಲ್ಲಿನ ವ್ಯಾಪಾರ, ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದ ಅಂಕಣಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ನ ಉಪಾಧ್ಯಕ್ಷರಾದ ಶ್ರೀ ಪಿ ಶ್ರೀನಿವಾಸ ತಂತ್ರಿ, ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮತ್ತು ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಸೂರಜ್ ಫ್ರಾನ್ಸಿಸ್ ನೊರೋನ್ಹ (Shri. P Srinivasa Tantry, Vice-President of SSVMET, Shri. Rathnakumar, Secretary of SSVMET, Principal of SMVITM Dr. Thirumaleshwara Bhat and Director of the MBA program Dr. Suraj Francis Noronha were present on the dias) ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್(vice Principal DR Ganesh Aital), ಡೀನ್, ವಿಭಾಗದ ಮುಖ್ಯಸ್ಥರು, ತರಬೇತಿ ಮತ್ತು ಉದ್ಯೋಗ ನಿಯೋಜನ ಅಧಿಕಾರಿ, ಸಂಸ್ಥೆಯ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕು. ಸುಪ್ರಿತ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಎಂಬಿಎ ವಿಭಾಗದ ಆಡಳಿತ ಅಧಿಕಾರಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಸೂರಜ್ ಫ್ರಾನ್ಸಿಸ್ ನೊರೋನ್ಹ ವಂದಿಸಿದರು. ಪ್ರಾಧ್ಯಾಪಕಿಯಾದ ಶ್ರೀಮತಿ ಅಕ್ಷತಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

