ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐದು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ (Five-Days’ Faculty Development Program on “Engineering Intelligence: An Advanced Technique in MATLAB”)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐದು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ
(Bantakal) ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ಇಂಜಿನಿಯರಿಂಗ್ ವಿಭಾಗವು ಕೋರ್‌ಇಎಲ್‌ಟೆಕ್ನಾಲಜೀಸ್, ಬೆಂಗಳೂರು ಮತ್ತು ಕಾಲೇಜಿನ ಐಎಸ್ಟಿಇ ಇವರ ಸಹಯೋಗದೊಂದಿಗೆ“ಇಂಜಿನಿಯರಿಂಗ್‌ಇಂಟೆಲಿಜೆನ್ಸ್ ಅಡ್ವಾನ್ಸ್ಡ್‌ಟೆಕ್ನಿಕ್ ಇನ್ ಮ್ಯಾಟ್‌ಲ್ಯಾಬ್” ಎಂಬ ವಿಷಯದ ಕುರಿತು ಐದು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರವನ್ನು ಜ. ೨೭ರಿಂದ ಜ. ೩೧ರ ವರೆಗೆ ಆಯೋಜಿಸಲಾಗಿತ್ತು.
ಈ ಕಾರ್ಯಾಗಾರದಲ್ಲಿ ಕೋರ್‌ಇಎಲ್ ಟೆಕ್ನಾಲಜೀಸ್‌ಇದರ ಹಿರಿಯ ಇಂಜಿನಿಯರ್ ರಕ್ಷಿತ್ ಬಿ ಎಸ್‌ರವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾಗತಿಕವಾಗಿ ಬಹಳ ಮುಂದುವರಿದ ತಂತ್ರಜ್ಞಾನದ ಬಗ್ಗೆ ವಿವರವಾಗಿ ತಿಳಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸಿದ ಅಧ್ಯಾಪಕರಿಗೆ ಮ್ಯಾಟ್ ಲ್ಯಾಬ್ ತಂತ್ರಜ್ಞಾನದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್‌ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, ಕಾರ್ಯಾಗಾರದಲ್ಲಿ ಭಾಗವಹಿಸುವ ಎಲ್ಲರೂ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಇಂತಹ ಕಾರ್ಯಗಾರಗಳು ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ಸಾಮರ್ಥ್ಯ ಹೆಚ್ಚಿಸುವಲ್ಲಿ ಬಹಳ ಪ್ರಯೋಜನಕಾರಿಯಾಗಿದೆ ಎಂದರು.
ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಡೀನ್‌ಗಳು, ವಿಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.