• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಪ್ರಥಮ ಚಿಕಿತ್ಸೆ” ಕುರಿತು ಉಪನ್ಯಾಸ (Workshop on “First Aid Awareness Program” at SMVITM)
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಪ್ರಥಮ ಚಿಕಿತ್ಸೆ” ಕುರಿತು ಉಪನ್ಯಾಸ (Workshop on “First Aid Awareness Program” at SMVITM)

Share: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಪ್ರಥಮ ಚಿಕಿತ್ಸೆ” ಕುರಿತು ಉಪನ್ಯಾಸ (Bantakal)ಬಂಟಕಲ್: ವಿಶ್ವ ಆರೋಗ್ಯದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management Bantakal) ರಾಷ್ಟ್ರೀಯ ಸೇವಾಯೋಜನೆ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಉಡುಪಿ, ಜಂಟಿಯಾಗಿ ಶನಿವಾರ “ಪ್ರಥಮ ಚಿಕಿತ್ಸೆ” ಕುರಿತು ಉಪನ್ಯಾಸವನ್ನು ಆಯೋಜಿಸಲಾಯಿತು.   ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಇದರ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರಾದ ಬಸ್ರೂರು ರಾಜೀವ ಶೆಟ್ಟಿ (Shri Basrur […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಪ್ರಥಮ ಚಿಕಿತ್ಸೆ” ಕುರಿತು ಉಪನ್ಯಾಸ

(Bantakal)ಬಂಟಕಲ್: ವಿಶ್ವ ಆರೋಗ್ಯದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management Bantakal) ರಾಷ್ಟ್ರೀಯ ಸೇವಾಯೋಜನೆ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಉಡುಪಿ, ಜಂಟಿಯಾಗಿ ಶನಿವಾರ “ಪ್ರಥಮ ಚಿಕಿತ್ಸೆ” ಕುರಿತು ಉಪನ್ಯಾಸವನ್ನು ಆಯೋಜಿಸಲಾಯಿತು.

  ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಇದರ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರಾದ ಬಸ್ರೂರು ರಾಜೀವ ಶೆಟ್ಟಿ (Shri Basrur Rajeev Shetty, Managing Body Member State and Chairman Indian Red Cross Society) ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಎಂಬುದು ಭಾರತದಲ್ಲಿ ನೆಲೆಗೊಂಡಿರುವ ಮಾನವ ಜೀವನ ಮತ್ತು ಆರೋಗ್ಯವನ್ನು ರಕ್ಷಿಸಲು ಇರುವ ಸ್ವಯಂ ಪ್ರೇರಿತ ಮಾನವೀಯ ಸಂಸ್ಥೆಯಾಗಿದೆ. ಇದರ ಮುಖ್ಯ ಉದ್ದೇಶ ವಿಪತ್ತುಗಳು, ತುರ್ತುಪರಿಸ್ಥಿತಿ ಸಮಯದಲ್ಲಿ ಪರಿಹಾರವನ್ನು ನೀಡುವುದು, ದುರ್ಬಲ ಜನರ ಮತ್ತು ಸಮುದಾಯಗಳ ಆರೋಗ್ಯವನ್ನು ಕಾಪಾಡುವುದಾಗಿದೆ ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ  ಗಣನಾಥ ಶೆಟ್ಟಿ ಎಕ್ಕಾರ್ (Dr. Gananath Shetty Yekkar, Secretary, Indian Red Cross Society, Udupi) ಮಾತನಾಡಿ, ಯುವ ರೆಡ್‌ಕ್ರಾಸ್ ಸಂಸ್ಥೆಯು ಪ್ರಥಮ ಚಿಕಿತ್ಸೆಯಲ್ಲಿ ಮಾಡಿದ ಗಮನಾರ್ಹ ಸಾಧನೆಯ ಬಗ್ಗೆ ಮಾಹಿತಿ ನೀಡಿದರು.

ರಕ್ತದಾನ, ಅಂಗಾಂಗ ದಾನ, ನಿಧಿ ಸಂಗ್ರಹಿಸುವ ಚಟುವಟಿಕೆಗಳು, ಪ್ರವಾಹ ಪರಿಹಾರ ಅಭಿಯಾನಗಳು ಮತ್ತು ವಿಪತ್ತು ನಿರ್ವಹಣೆಯ ಬಗ್ಗೆ ಮತ್ತು  ಯುವ ಜನತೆಯು ತಮ್ಮ ಬಿಡುವಿನ ಸಮಯದಲ್ಲಿ ಇಂತಹ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು.

  ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ (Dr. Thirumaleshwara Bhat, Principal)ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅವರು ಮಾತನಾಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿದರು.

 ಮಂಗಳೂರಿನ ಪ್ರಮಾಣಿಕೃತ ಪ್ರಥಮ ಚಿಕಿತ್ಸಾ ತರಬೇತಿದಾರ ಅಶ್ವಿನ್ ಕುಮಾರ್ ಎಂ, (Mr. Ashwin Kumar M, Certified First Aid Trainer, Mangaluru) ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಅವರು ಮಾತನಾಡಿ, ಪ್ರಥಮ ಚಿಕಿತ್ಸಾ ಕೌಶಲ್ಯ, ಮೌಲ್ಯ ಮತ್ತು ವಿವಿಧ ಸಂದರ್ಭಗಳಲ್ಲಿ ಅದನ್ನು ಹೇಗೆ ನೀಡಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.

  ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ  ನಾಗರಾಜ್ ರಾವ್ ಸ್ವಾಗತಿಸಿದರು.

 ವಿದ್ಯಾರ್ಥಿಗಳಾದ ಸಾಕ್ಷಿ ಪ್ರಾರ್ಥಿಸಿದರು.  ಶ್ರಾವ್ಯ ಮತ್ತು ಮಾನ್ಯ ಅತಿಥಿಗಳನ್ನು ಪರಿಚಯಿಸಿದರು. ಮೈತ್ರಿ ಶೆಟ್ಟಿ ವಂದಿಸಿದರು. ಪ್ರಿನ್ಸಿಟಾ ಮೆನೆಜಸ್ ಕಾರ್ಯಕ್ರಮ ನಿರೂಪಿಸಿದರು.

 ಕಾರ್ಯಾಗಾರದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.