ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ (NATIONAL MATHEMATICS DAY CELEBRATION AT SMVITM)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗವು ಐಎಸ್ಟಿಇ ಅಧ್ಯಾಪಕರ ಅಧ್ಯಯನ ಘಟಕದ ಸಹಯೋಗದೊಂದಿಗೆ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀ ಶ್ರೀನಿವಾಸ ರಾಮಾನುಜನ್ ಅವರ 137 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಗಣಿತ ದಿನ” ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಗಣಿತ ಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಬೆಳೂರುರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಅವರು ಮಾತನಾಡಿ, ಗಣಿತದಿಂದ ನಮಗೆ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಸಿಗುತ್ತದೆ. ಜೀವನವು ಗಣಿತದ ಸಮೀಕರಣವಾಗಿದೆ. ಇದು ನಕಾರಾತ್ಮಕತೆಯನ್ನು ಧನಾತ್ಮಕವಾಗಿ ಬದಲಾಯಿಸುವುದು ಹೇಗೆ ಎಂದು ತಿಳಿಸುತ್ತದೆ. ಗಣಿತವನ್ನು ಚಹಾ ತಯಾರಿಕೆಯಿಂದ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೇಗೆ ಅನ್ವಯಿಸಲಾಗುತ್ತದೆ ಎಂದು ಉದಾಹರಣೆಯ ಸಹಿತ ವಿವರಿಸಿದರು.
ಈ ಸಂದರ್ಭದಲ್ಲಿ ಗಣಿತದಲ್ಲಿ ಶೇಕಡಾ 100 ಅಂಕಗಳಿಸಿದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಲೊಲಿಟಾ ಪ್ರಿಯಾ ಕ್ಯಾಸ್ತಲಿನೊ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಕಾಶಿಶ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು.