• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ (Blood Donation Camp at SMVITM)
- Helth

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ (Blood Donation Camp at SMVITM)

Share:  ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ   ಕಾಲೇಜಿನ ಆವರಣದಲ್ಲಿ ನಡೆದ ರಕ್ತದಾನ ಶಿಬಿರ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ರಕ್ತ ಕೇಂದ್ರದ ಸಹಯೋಗದೊಂದಿಗೆ   ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.     ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ದೀಪ್ ಮಡ್ಕೈಕರ್, ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರ ಮಣಿಪಾಲದ ಐ ಎಚ್ […]

(Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ರಕ್ತ ಕೇಂದ್ರದ ಸಹಯೋಗದೊಂದಿಗೆ   ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ದೀಪ್ ಮಡ್ಕೈಕರ್, ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರ ಮಣಿಪಾಲದ ಐ ಎಚ್ ಬಿ ಟಿ ವಿಭಾಗದ ಸಹಾಯಕ ಪ್ರಾಧ್ಯಾಪಕರು ಮತ್ತು ಗೌರವ ಅತಿಥಿಗಳಾಗಿ ಉಡುಪಿಯ ಎಚ್ ಡಿ ಎಫ್ ಸಿ ಬ್ಯಾಂಕ್‌ನ ಕಾರ್ಯಾಚರಣೆ ವ್ಯವಸ್ಥಾಪಕರಾದ ರಾಘವೇಂದ್ರ ರಾವ್ ಅವರು ಭಾಗವಹಿಸಿದ್ದರು.

  ಡಾ. ದೀಪ್  ಮಡ್ಕೈಕರ್ ಮಾತನಾಡಿ, ರಕ್ತದಾನದ ಮೂಲಕ ಜೀವ ಉಳಿಸುವ ಮೌಲ್ಯದ ಬಗ್ಗೆ ತಿಳಿಸಿದರು. ಮತ್ತು ಕಾರ್ಯಕ್ರಮವನ್ನು ಆಯೋಜಿಸಲು ಬೆಂಬಲ ನೀಡಿದ್ದಕ್ಕಾಗಿ ಸಂಸ್ಥೆಯ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.

 ರಾಘವೇಂದ್ರ ರಾವ್ ಇವರು ಮಾತನಾಡಿ, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿದ್ಯಾಥಿಗಳನ್ನು ಪ್ರೇರೇಪಿಸಿದರು.

  ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಂದ ಸೇರಿ ಒಟ್ಟು 150 ಕ್ಕೂ ಅಧಿಕ ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.