ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “DEVHOST -2024” ರಲ್ಲಿ ಬಹುಮಾನ
(Bantakal) ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮಂಗಳೂರು ಸಹ್ಯಾದ್ರಿ ತಾಂತ್ರಿಕ ಕಾಲೇಜಿನಲ್ಲಿ ನಡೆದ “DEVHOST -2024 ತಾಂತ್ರಿಕ ಸ್ಪರ್ಧೆಗಳಲ್ಲಿ ಬಹುಮಾನವನ್ನು ಪಡೆದಿದ್ದಾರೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಕಿರಣ್ ಭಟ್, ಸೂರಜ್ ಭಾಗವತ್, ಸಾತ್ವಿಕ್ ಎಸ್ ಭಟ್, ಪ್ರದ್ಯುನ್ಮಾ ನ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ ವಿಭಾಗದ ಅಂಜಲಿ ಇವರು ರೋಬೋಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದರು.
ಗಣಕಯಂತ್ರ ವಿಭಾಗದ ಪವನ್ ಗೊಂಡ್, ರಂಜನ್ ಪೂಜಾರಿ, ವಿಜೇತ್ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಹರ್ಷ ಗುಣಗಾ ತೃತೀಯ ಸ್ಥಾನಗಳಿಸಿದ್ದಾರೆ.
ಗಣಕಯಂತ್ರ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ತೇಜಸ್ ನಾಯಕ್, ಸ್ವಸ್ತಿಕ್ ಯಶ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ ವಿಭಾಗದ ಪೂರ್ಣಾನಂದ ಹ್ಯಾಕ್ ನೈಟ್ 2024 (24 ಗಂಟೆಗಳ ಹ್ಯಾಕೊಥಾನ್) ಎಂಬ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಪ್ರೊ. ಡಾ. ತಿರುಮಲೇಶ್ವರ ಭಟ್ ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

