ಬಂಟಕಲ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕರ ಸಭೆ (PARENT- TEACHER MEET AT SMVITM, BANTAKAL)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕ– ರಕ್ಷಕರ ಸಭೆ
(Bantakal) ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ 2024-25ನೇ ಸಾಲಿನ ಶಿಕ್ಷಕ-ರಕ್ಷಕರ ಮೊದಲನೆಯ ಸಭೆ ಸಂಸ್ಥೆಯ ಆವರಣದಲ್ಲಿ ನೆರವೇರಿತು.
ಇಂಜಿನಿಯರಿಂಗ್ ಕೋರ್ಸಿನ ಬಗ್ಗೆ ಅರಿವು ಮೂಡಿಸುವುದು, ಸಂಸ್ಥೆಯ ನಿಯಮಗಳು ಮತ್ತು ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಾಲೇಜಿನ ಬಹು ದೊಡ್ಡ ಆಸ್ತಿಯಾಗಿದ್ದು ಕಾಲೇಜಿನಲ್ಲಿರುವ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಮುಂದಿನ ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಅವರು ಆಶಿಸಿದರು. ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಪೋಷಕರು ವಿದ್ಯಾಸಂಸ್ಥೆಯೊಂದಿಗೆ ಕೈಜೋಡಿಸಬೇಕಾದ ಅನಿವಾರ್ಯತೆಯನ್ನು ಮನದಟ್ಟು ಮಾಡಿ, ನಮ್ಮ ಕಾಲೇಜು ಶೈಕ್ಷಣಿಕ ಸ್ವಾಯತ್ತತೆ ಹೊಂದುವ ಬಗ್ಗೆ ತಿಳಿಸಿ, ಶೈಕ್ಷಣಿಕ ಸ್ವಾಯತ್ತತೆಯ ಉಪಯೋಗವನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಡಾ ಸಿ. ಕೆ ಮಂಜುನಾಥ್ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಹೇಗೆ ಸಾಧನೆ ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳ ಸರ್ವೊತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆಯೂ ತಿಳಿಸಿದರು.
ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ರವಿಪ್ರಭಾ ಕೆ ಇವರು ಸಂಯೋಜಿಸಿದರು. ವಿದ್ಯಾರ್ಥಿನಿಯಾದ ಶರಣ್ಯ ತಂತ್ರಿ ಪ್ರಾರ್ಥಿಸಿದರು, ಪ್ರಾಧ್ಯಾಪಕಿ ಸ್ತುತಿಯವರು ಕಾರ್ಯಕ್ರಮ ನಿರೂಪಿಸಿದರು.