ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿAಗ್ ವಿಭಾಗವು ಕಾಲೇಜಿನ ಇನ್ನೋವೇಶನ್ ಘಟಕ ಮತ್ತು ಐಎಸ್‌ಟಿಇ ಘಟಕದ ಸಹಯೋಗದೊಂದಿಗೆ ರಾಜ್ಯಮಟ್ಟದ ೨೪ ಗಂಟೆಗಳ ಹ್ಯಾಕಥಾನ್ ಹ್ಯಾಕೋತ್ಸವ ೨೦೨೩ರ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಆವರಣದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ವಿದ್ಯಾರ್ಥಿ ನಿರ್ದೇಶಕರಾದ ಡಾ. ಗೀತಾ ಮಯ್ಯ ಉದ್ಘಾಟಿಸಿದರು.
ಕರ‍್ಯಕ್ರಮಕ್ಕೆ ್ಕ ಮಂಗಳೂರಿನ ಕಂಬಳ ಸೊಲ್ಯುಶನ್ಸ್, ಬಿವಾಮ್ ಇಂಡಿಯ ಮತ್ತು ನಿವ್ಯಸ್ ಸೊಲ್ಯುಶನ್ಸ್ ಪ್ರಾಯೊಜಕತ್ವ ನೀಡಿದ್ದರು.
ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಇದರ ಕಾರ್ಯದರ್ಶಿ ರತ್ನಕುಮಾರ್ ಕರ‍್ಯಕ್ರಮಕ್ಕೆ ಶುಭ ಹಾರೈಸಿದರು.
ಕಾಲೇಜಿನ ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಅಧ್ಯಕ್ಷತೆ ವಹಿಸಿದ್ದರು.
ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಸೌಮ್ಯ ಜೆ ಭಟ್ ಮತ್ತು ಎಲೆಕ್ಟಾçನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ವಿಭಾಗದ ಡಾ. ಗುರುಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

