ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿಪ್ರಶಸ್ತಿ”
(Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ ಬಂಟಕಲ್ ಇಲ್ಲಿಯ ಅಂತಿಮ ವರ್ಷದ ಗಣಕ ಯಂತ್ರ ವಿಭಾಗದ ವಿದ್ಯಾರ್ಥಿಯಾದ ಧನುಶ್ ಶಾಸ್ತ್ರಿಯವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2024-25 ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಕರ್ನಾಟಕ ಐಎಸ್‌ಟಿಇ ವತಿಯಿಂದ ನೀಡಲಾಗಿದೆ.
ನ್ಯೂಹೊರಿಝೊನ್ ಇಂಜಿನಿಯರಿಂಗ್‌ಕಾಲೇಜ್, ಬೆಂಗಳೂರು ಇಲ್ಲಿ ಮಾ. 28ರಂದು ನಡೆದ ನಡೆದ 20ನೇ ಕರ್ನಾಟಕ ರಾಜ್ಯ ಮಟ್ಟದ ಐಎಸ್‌ಟಿಇ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸತತವಾಗಿ ಏಳನೇ ಬಾರಿಗೆ ಈ ಪ್ರಶಸ್ತಿಯು ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ದೊರಕಿರುವುದಕ್ಕೆ ಸಂಸ್ಥಾಪಕರು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಕಾರ್ಯದರ್ಶಿಯವರಾದ ಶ್ರೀ ರತ್ನಕುಮಾರ್ ಮತ್ತು ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್‌ರವರು ಹರ್ಷ ವ್ಯಕ್ತಪಡಿಸಿದ್ದಾರೆ.

