• Home  
  • ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್  ಪಂದ್ಯಾವಳಿ  ಉದ್ಘಾಟನೆ (VTU Mangalore Division Intercollegiate Volleyball Tournament (Men) 2025 : SMVITM, Bantakal Hosts Prestigious Sporting Event)
- ಕ್ರೀಡೆ - ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್  ಪಂದ್ಯಾವಳಿ  ಉದ್ಘಾಟನೆ (VTU Mangalore Division Intercollegiate Volleyball Tournament (Men) 2025 : SMVITM, Bantakal Hosts Prestigious Sporting Event)

Share: ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ವಾಲಿಬಾಲ್  ಪಂದ್ಯಾವಳಿ  ಉದ್ಘಾಟನೆ (Bantakal) ಬಂಟಕಲ್:‌ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಪ್ರಂಗಣದಲ್ಲಿ ಮಂಗಳವಾರ   ನಡೆಯಿತು.   ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿಯಾದ ಪ್ರೊ. ಡಾ. ರಾಧಕೃಷ್ಣ ಎಸ್ ಐತಾಳ್ ಇವರು ಭಾಗವಹಿಸಿದರು. ಅವರು […]

(Bantakal) ಬಂಟಕಲ್:‌ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಪ್ರಂಗಣದಲ್ಲಿ ಮಂಗಳವಾರ   ನಡೆಯಿತು.

  ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿಯಾದ ಪ್ರೊ. ಡಾ. ರಾಧಕೃಷ್ಣ ಎಸ್ ಐತಾಳ್ ಇವರು ಭಾಗವಹಿಸಿದರು.

ಅವರು ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿ ದೈಹಿಕ ಶಿಕ್ಷಣವು ಪ್ರಮುಖ ಪಾತ್ರವಹಿಸುತ್ತದೆ. ಕ್ರೀಡೆಯು ನಮ್ಮ ದೇಹದ ಸಧೃಡತೆಗೆ ಮತ್ತು ಉತ್ತಮ ಆರೋಗ್ಯಕ್ಕೆ ಸಹಾಯಕವಾಗಿದೆ. ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕೆಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ವಹಿಸಿದ್ದರು.

  ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ತಮ್ಮ ಮಾನಸಿಕ, ದೈಹಿಕ ಮತ್ತು ಸಾಮಾಜಿಕ  ಯೋಗಕ್ಷೇಮ ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಕಾಪಾಡಿಕೊಳ್ಳಲು ಕ್ರೀಡೆಗಳನ್ನು ಆಡುವುದು ಬಹಳ ಮುಖ್ಯ ಎಂದರು. ಅಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಗಣೇಶ ಐತಾಳ್, ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಪೌಲ್ ಸೂರಜ್ ಮತ್ತು ಶುಭಶ್ರೀ ಇವರು ತಂಡಗಳನ್ನು ಅತಿಥಿಗಳಿಗೆ ಪರಿಚಯಿಸಿದರು.

ವಿದಾರ್ಥಿ ಆದಿತ್ಯ ದೇಶಪಾಂಡೆ ಪ್ರಾರ್ಥಿಸಿದರು. ಗಣಕ ಯಂತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಸೌಂದರ್ಯ ಇವರು ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.

  ಪಂದ್ಯಾವಳಿಯಲ್ಲಿ ಮಂಗಳೂರು ವಲಯದ ವಿವಿಧ ತಾಂತ್ರಿಕ ಕಾಲೇಜುಗಳ 14ತಂಡಗಳು ಭಾಗವಹಿಸಿದ್ದವು.

Leave a comment

Your email address will not be published. Required fields are marked *

eMedia Kannada  @2025. All Rights Reserved.